ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಮಾದರಿ: ಸಿಜಿಎಂ ಟಿ.ರಮೇಶ್

Last Updated 22 ಅಕ್ಟೋಬರ್ 2022, 5:57 IST
ಅಕ್ಷರ ಗಾತ್ರ

ಮಂಗಳೂರು: ದೇಶದ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ಅಗ್ರ ಸ್ಥಾನದಲ್ಲಿದೆ. ಕೋರ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕ್‍ನಂತಹ ಉತ್ಕೃಷ್ಟ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಹಕಾರಿ ಬ್ಯಾಂಕಿಂಗ್‍ನಲ್ಲಿ ಅಳವಡಿಸಿರುವ ಬ್ಯಾಂಕ್, ಎಂ.ಎನ್.ರಾಜೇಂದ್ರ ಅಧ್ಯಕ್ಷತೆಯಲ್ಲಿ ಗಣನೀಯ ಪ್ರಗತಿಯನ್ನು ಕಂಡಿದೆ ಎಂದು ನಬಾರ್ಡ್ ಸಿಜಿಎಂ ಟಿ.ರಮೇಶ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗೆ ಶುಕ್ರವಾರ ಭೇಟಿ ನೀಡಿ ಆಡಳಿತ ಮಂಡಳಿಯ ನಿರ್ದೇಶಕರೊಂದಿಗೆ ಅವರು ಮಾತನಾಡಿದರು. ಎಸ್‌ಸಿಡಿಸಿಸಿ ಬ್ಯಾಂಕ್ ದೇಶದ ಡಿಸಿಸಿ ಬ್ಯಾಂಕ್‍ಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಆಗಿದೆ. ಸಂಪೂರ್ಣ ಗಣಕೀಕೃತವಾಗಿರುವ 111 ಶಾಖೆಗಳ ಮೂಲಕ ಕಾರ್ಯನಿರ್ವಹಿಸುತ್ತಿರುವ ಈ ಬ್ಯಾಂಕ್ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಮಾದರಿಯಾಗಿದೆ ಎಂದರು.

ಐದು ಬ್ಯಾಂಕ್‍ಗಳು ಉಗಮವಾದ ಜಿಲ್ಲೆಯಲ್ಲಿ ಸಹಕಾರಿ ಸ್ವಾಮ್ಯದ ಎಸ್‍ಸಿಡಿಸಿಸಿ ಬ್ಯಾಂಕ್ ಪೈಪೋಟಿಯಿಂದ ಕಾರ್ಯನಿರ್ವಹಿಸಿ ಅಗ್ರಸ್ಥಾನದಲ್ಲಿರುವುದು ಅಭಿನಂದನಾರ್ಹ. ಬ್ಯಾಂಕ್ ಸ್ವಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲೂ ಅಗ್ರಸ್ಥಾನದಲ್ಲಿದೆ. ಕೃಷಿ ಪತ್ತಿನ ಸಹಕಾರ ಸಂಘಗಳ ಬಲವರ್ಧನೆಗಾಗಿ ಎಸ್‍ಸಿಡಿಸಿಸಿ ಬ್ಯಾಂಕ್ ಶ್ರಮಿಸುತ್ತಿರುವುದರಿಂದ ಜಿಲ್ಲೆಯಲ್ಲಿ ಸಹಕಾರಿ ರಂಗ ಉನ್ನತಿಯನ್ನು ಕಾಣುತ್ತಿದೆ ಎಂದರು.

ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರು ಬ್ಯಾಂಕ್ ಪ್ರಗತಿಯ ಪರಿಚಯ ಮಾಡಿಕೊಟ್ಟರು. ಬ್ಯಾಂಕಿಗೆ ಮೊದಲ ಬಾರಿ ಭೇಟಿ ನೀಡಿದ ಟಿ.ರಮೇಶ್ ಅವರನ್ನು ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು.

ಬ್ಯಾಂಕ್‌ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಬಿ.ನಿರಂಜನ್, ಟಿ.ಜಿ.ರಾಜಾರಾಮ ಭಟ್, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕ್ ಕುಮಾರ್ ಶೆಟ್ಟಿ, ಎಸ್.ಬಿ.ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಹರೀಶ್ಚಂದ್ರ ಕೆ., ಜೈರಾಜ್ ಬಿ.ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಸಹಕಾರ ಸಂಘಗಳ ಉಪನಿಬಂಧಕ ಲಕ್ಷ್ಮೀ ನಾರಾಯಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ, ಮಹಾಪ್ರಬಂಧಕ ಅಶೋಕ್ ಕುಮಾರ್ ಕೆ., ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್, ನವೋದಯ ಟ್ರಸ್ಟಿ ಮೇಘರಾಜ್ ಜೈನ್, ನವೋದಯ ಗ್ರಾಮವಿಕಾಸ ಚಾರಿಟಬಲ್ ಟ್ರಸ್ಟ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT