ಭಾನುವಾರ, ಆಗಸ್ಟ್ 14, 2022
21 °C

ಪದ್ಮಾಸನ ಹಾಕಿ, ಕಾಲಿಗೆ ಸರಪಳಿ ಬಿಗಿದು ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಈಜು ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಬಂಟ್ವಾಳದ ಕಲ್ಮಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗರಾಜ ಖಾರ್ವಿ ಕಂಚುಗೋಡು ಡಿ.18 ರಂದು ಬೆಳಿಗ್ಗೆ 8ಕ್ಕೆ ನಗರದ ತಣ್ಣೀರು ಬಾವಿ ಬಳಿ ಅರಬ್ಬಿಸಮುದ್ರದಲ್ಲಿ ಒಂದು ಕಿ.ಮೀ. ದೂರ ಪದ್ಮಾಸನ ಹಾಕಿ, ಕಾಲಿಗೆ ಸರಪಳಿ ಬಿಗಿದು ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಈಜಲಿದ್ದಾರೆ.

‘ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಹಾಗೂ ಈಜು ಮತ್ತು ಯೋಗದ ಕುರಿತು ಜಾಗೃತಿ ಮೂಡಿಸುವುದು ಹಾಗೂ ಸಮುದ್ರದ ಬಗೆಗಿನ ಭಯ ಹಾಗೂ ತಪ್ಪು ಕಲ್ಪನೆ ದೂರ ಮಾಡುವ ಸಲುವಾಗಿ ಹಮ್ಮಿಕೊಳ್ಳಲಾಗಿದೆ’ ಎಂದು ಬುಧವಾರ ಇಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಹಿತಿ ನೀಡಿದರು.

‘ಕುಂದಾಪುರ ಕಂಚುಗೋಡು ಮೀನುಗಾರ ಕುಟುಂಬದಿಂದ ಬಂದ ನಾನು ಬಾಲ್ಯದಲ್ಲೇ ಸಮುದ್ರದಲ್ಲಿ ಈಜುತ್ತಿದ್ದೆನು. ಆದರೆ, ಈಜಿನ ವಿವಿಧ ಶೈಲಿಗಳನ್ನು ತರಬೇತುದಾರ ಬಿ. ಕೆ. ನಾಯ್ಕ್ ಕಲಿಸಿದರು. ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಮೂಲಕ ಯೋಗ ಕಲಿತುಕೊಂಡೆ. ಕಳೆದ ಜನವರಿಯಲ್ಲಿ ಗುಜರಾತ್‍ನ ವಡೋದರಾದಲ್ಲಿ ನಡೆದ ರಾಷ್ಟ್ರ ಮಟ್ಟದ ಈಜುಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕ, ಒಂದು ಕಂಚಿನ ಪದಕ ಗೆದ್ದಿದ್ದೆ. ಇದೇ ರಾಷ್ಟ್ರೀಯ ದಾಖಲೆ ನಿರ್ಮಿಸಲು ಪ್ರೇರಣೆಯಾಯಿತು’ ಎಂದು ತಿಳಿಸಿದರು.

ಈಜು ಗುರು ಬಿ. ಕೆ. ನಾಯ್ಕ್, ತರಬೇತುದಾರರಾದ ಶಿವಾನಂದ ಗಟ್ಟಿ, ಲೋಕರಾಜ್, ಈಜುಪಟು ಅಶೋಕ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು