ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿಕ ಎಂಬ ಕಾರಣಕ್ಕೆ ಕಾಲೆಳೆಯುವ ಕೆಲಸ: ನಳಿನ್ ಆರೋಪ

Published 24 ಜನವರಿ 2024, 21:00 IST
Last Updated 24 ಜನವರಿ 2024, 21:00 IST
ಅಕ್ಷರ ಗಾತ್ರ

ಮಂಗಳೂರು: ‘ನಾನು ಹಳ್ಳಿಯಿಂದ ಬಂದವ, ಕೃಷಿಕ. ಹಳ್ಳಿಯವ ಎಂಬ ಕಾರಣಕ್ಕೆ ಈಗಲೂ ನನ್ನ ಕಾಲೆಳೆಯುವ ಕೆಲಸ ನಿರಂತರವಾಗಿ ಸಾಗುತ್ತಿದೆ’ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು
ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಗರದ ಕುಲಶೇಖರದಲ್ಲಿರುವ ಒಕ್ಕೂಟದ ಡೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಮಂಗಳೂರು ಡೈರಿಯ ಉಗ್ರಾಣಕ್ಕೆ ಶಂಕುಸ್ಥಾಪನೆ ಹಾಗೂ ವಸತಿ ಸಮುಚ್ಚಯದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕೃಷಿಕ ಎಂಬ ಕಾರಣದಿಂದ ನನ್ನನ್ನು ಕೆಳಕ್ಕೆ ಇಳಿಸುವ ಹುನ್ನಾರ ನಡೆಯುತ್ತಿದೆ’ ಎಂದರು.

‘ನಾನು ಈಗಲೂ 32 ನಾಟಿ ಹಸುಗಳನ್ನು ಸಾಕುತ್ತಿದ್ದೇನೆ. ದಿನಕ್ಕೆ 4 ಲೀಟರ್ ಹಾಲು ಮಾತ್ರ ಅವುಗಳಿಂದ ಸಿಗುತ್ತದೆ. ಆದರೂ ಹೈನುಗಾರಿಕೆ ಮತ್ತು ಪಶುಪಾಲನೆಯ ಸಂಸ್ಕೃತಿ ಉಳಿಯಬೇಕು ಎಂಬ ಕಾರಣಕ್ಕೆ ದನಗಳನ್ನು ಉಳಿಸಿಕೊಂಡಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT