ಭಾನುವಾರ, ಜೂನ್ 13, 2021
29 °C

ಲಸಿಕೆ ಬಗ್ಗೆ ಟೀಕೆ ಮಾಡಿದವರಿಂದಲೇ ಈಗ ಕಣ್ಣೀರು: ನಳಿನ್‌ಕುಮಾರ್ ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ಆರಂಭದಲ್ಲಿ ಬಿಜೆಪಿಯ ಲಸಿಕೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡಿದವರೇ ಇಂದು ಲಸಿಕೆ ಸಿಗುತ್ತಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ. ಜನರ ದಾರಿ ತಪ್ಪಿಸುವ ಜತೆಗೆ, ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಟೀಕಿಸಿದರು.

ಕೋವಿಡ್‌ನಿಂದ ಹಲವರು ಮೃತರಾಗಲು ಇದೇ ಪಕ್ಷಗಳು ಕಾರಣವಾಗಿವೆ. ಆಗ ಜನರ ದಾರಿ ತಪ್ಪಿಸಿದ ಕಾರಣಕ್ಕೆ ಜನರು ಲಸಿಕೆ ತೆಗೆದುಕೊಂಡಿರಲಿಲ್ಲ ಎಂದರು.

ರಾಜ್ಯದ ಸೆಮಿ ಲಾಕ್‍ಡೌನ್ ವಿಸ್ತರಣೆ ಕುರಿತು ಯಾವುದೇ ಸಲಹೆ ನೀಡಿಲ್ಲ. ಬೆಂಗಳೂರು ಸೇರಿ ಪ್ರಮುಖ ಐದು ಜಿಲ್ಲೆಗಳಲ್ಲಿ ಲಾಕ್‍ಡೌನ್ ನಿಯಮಗಳನ್ನು ಇನ್ನಷ್ಟು ಕಟ್ಟುನಿಟ್ಟು ಮಾಡಿದರೆ ಉತ್ತಮ. ಈ ಅಂಶವನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಕೋವಿಡ್ ರೋಗಿಗಳಿಗೆ ಆಂಬುಲೆನ್ಸ್ ಸೇವೆ ಉಚಿತವಾಗಿ ಸಿಗಲಿ ಎಂಬ ಸಲಹೆ ನೀಡಿದ್ದೇನೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು