ಮಂಗಳೂರು: ‘ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಚರ್ಚೆಯೇ ನಡೆದಿಲ್ಲ. ನಮ್ಮ ಸರ್ವಸಮ್ಮತ ನಾಯಕ ಬಿ.ಎಸ್.ಯಡಿಯೂರಪ್ಪ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಭಾನುವಾರ ಪುನರುಚ್ಛರಿಸಿದ್ದಾರೆ.

ಸುದ್ದಿಗಾರರೊಂದಿಗೆ ಇಲ್ಲಿ ಮಾತನಾಡಿದ ಅವರು, ‘ಒಬ್ಬ ಕಾರ್ಯಕರ್ತನಾಗಿ, ಪಕ್ಷದ ವರಿಷ್ಠರು, ಪಕ್ಷದ ಸೂಚನೆ ಬದ್ಧನಾಗಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿರುವುದು ಎಲ್ಲರಿಗೂ ಆದರ್ಶವಾಗಿದೆ. ಪರ್ಯಾಯ ನಾಯಕತ್ವದ ಕುರಿತು ಅವರು ಸಹಜ ಹೇಳಿಕೆ ನೀಡಿದ್ದಾರೆ. ಸದ್ಯಕ್ಕೆ ಕೋವಿಡ್ ನಿಯಂತ್ರಣ ನಮ್ಮ ಆದ್ಯತೆಯಾಗಿದೆ. ಪಕ್ಷದಲ್ಲಿ ಆತಂರಿಕವಾಗಿ ಯಾವುದೇ ಬಂಡಾಯವಿಲ್ಲ. ನೋವು, ಅಸಮಾಧಾನ ಇದ್ದರೆ ಮಾತುಕತೆ ನಡೆಸಲು ತಿಳಿಸಲಾಗಿದೆ. ಸರ್ಕಾರ ನಡೆಸುವಾಗ ಇಂತಹ ಸಣ್ಣಪುಟ್ಟ ಸಮಸ್ಯೆಗಳು ಇರುತ್ತವೆ. ಅದನ್ನೆಲ್ಲ ಸರಿಪಡಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.