ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾ.ಹೆ.169 ನವೀಕರಣಕ್ಕೆ ₹7.99 ಕೋಟಿ: ನಳಿನ್‌ ಕುಮಾರ್ ಕಟೀಲ್

Last Updated 23 ಜುಲೈ 2020, 12:40 IST
ಅಕ್ಷರ ಗಾತ್ರ

ಮಂಗಳೂರು: ‘ರಾಷ್ಟ್ರೀಯ ಹೆದ್ದಾರಿ –169 (ಹಿಂದಿನ ರಾ.ಹೆ.–13) ನಿಯತಕಾಲಿಕ ನವೀಕರಣಕ್ಕಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ₹7.99 ಕೋಟಿ ಮಂಜೂರಾತಿಗೆ ಅನುಮೋದನೆ ನೀಡಿದ್ದಾರೆ. ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ’ ಎಂದು ಸಂಸದ ನಳಿನ್‌ ಕುಮಾರ್ ಕಟೀಲ್ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ– 13 ಸೋಲಾಪುರ-ಮಂಗಳೂರು ವಿಭಾಗದ 706 ಕಿ.ಮೀ.ಯಿಂದ 710.83 ರತನಕ, 714.80 ಕಿ.ಮೀ.ಯಿಂದ 731.29 ಕಿ.ಮೀ. ತನಕ 736.63 ಕಿ.ಮೀ.ಯಿಂದ 743.90 ಕಿ.ಮೀ. ನಡುವಿನ ರಸ್ತೆಯ ನಿಯತಕಾಲಿಕ ನವೀಕರಣಕ್ಕಾಗಿ ಒಟ್ಟು ಮೊತ್ತ ₹7.99 ಕೋಟಿಗೆ ಮಂಜೂರಾತಿ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಸಚಿವರಿಗೆ ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT