ಶುಕ್ರವಾರ, ಡಿಸೆಂಬರ್ 4, 2020
24 °C

ದೇಶದಲ್ಲಿ ಈಗ ಬಿಜೆಪಿ ಸುವರ್ಣ ಯುಗ: ನಳಿನ್ ಕುಮಾರ್ ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದೇಶದಲ್ಲಿ ಈಗ ಬಿಜೆಪಿ ಸ್ವರ್ಣ ಯುಗ. ದೇಶದಲ್ಲಿ ಮೋದಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ಆಡಳಿತ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಇಲ್ಲಿ ನಡೆಯುತ್ತಿರುವ  ಬಿಜೆಪಿಯ ರಾಜ್ಯ ವಿಶೇಷ ಸಭೆ (ಕಾರ್ಯಕಾರಿಣಿ)ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಕರಾವಳಿ ಮಾದರಿ ರಾಜ್ಯದಲ್ಲಿ ಸಂಘಟನೆ ಮಾಡಲಾಗುವುದು. ಪೇಜ್ ಪ್ರಮುಖ್,‌ ಪಂಚರತ್ನರ ಮೂಲಕ ಸಂಘಟನೆ ಇನ್ನಷ್ಟು ಬಲ ಪಡಿಸಲಾಗುವುದು. ರಾಜರಾಜೇಶ್ವರಿ ಮತ್ತು ಶಿರಾ ಗೆಲುವು ಮಾತ್ರವಲ್ಲ, ಮುಂದಿನ  ಪಂಚಾಯತಿ ಚುನಾವಣೆಯಲ್ಲೂ ಶೇ 80ರಷ್ಟು ಗೆಲ್ಲುತ್ತೇವೆ. ಒಂದು ಸ್ಥಾನವಲ್ಲ, ಅರ್ಧ ಸ್ಥಾನವನ್ನೂ ವಿಪಕ್ಷಗಳಿಗೆ ಬಿಡುವುದಿಲ್ಲ. ಇದೇ ನಮ್ಮ ಗುರಿ. ಪ್ರತಿ ತಿಂಗಳು ಬೇರೆ ಬೇರೆ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಆಯೋಜಿಸಲಾಗುವುದು’ ಎಂದರು.

ಇದನ್ನೂ ಓದಿ...ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ತಡೆಗೆ‌ ರಾಜ್ಯದಲ್ಲಿ ಬಿಗಿ ಕ್ರಮ: ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕಾರಿಣಿ ಉದ್ಘಾಟಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಡಿ.ವಿ. ಸದಾನಂದ ಗೌಡ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಜಗದೀಶ ಶೆಟ್ಟರ್, ಆರ್.ಅಶೋಕ, ಕೆ.ಎಸ್.ಈಶ್ವರಪ್ಪ, ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಕೋಟ ಶ್ರೀನಿವಾಸ ಇದ್ದರು.

ಇದಕ್ಕೂ ಮೊದಲು ಮುಖ್ಯಮಂತ್ರಿ ಹಾಗೂ ಗಣ್ಯರು  ಚೆಂಡೆ, ಮದ್ದಳೆ ಮತ್ತಿತರ ನಿನಾದದ ಮೆರವಣಿಗೆ ಮೂಲಕ ವೇದಿಕೆಗೆ ಬಂದರು.

ಅತಿಥಿಗಳಿಗೆ ಕಟೀಲು ದುರ್ಗಾ ಪರಮೇಶ್ವರಿ ಮೂರ್ತಿ ನೀಡಿ ಸ್ವಾಗತಿಸಲಾಯಿತು.

ಇದನ್ನೂ ಓದಿ... ಮುಂದಿನ ವರ್ಷ ಭಾರತ 8.5ರಷ್ಟು ಜಿಡಿಪಿ ಸಾಧಿಸಲಿದೆ: ಡಿ.ವಿ.ಸದಾನಂದ ಗೌಡ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು