ಮಂಗಳೂರು: ಕರ್ನಾಟಕ ಬ್ಯಾಂಕ್ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನಿವೃತ್ತರಾಗಿದ್ದ ನಂದಳಿಕೆ ಬಾಲಚಂದ್ರ ರಾವ್ (72) ಬುಧವಾರ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ.

ನಂದಳಿಕೆ ಮುದ್ದಣ ಸ್ಮಾರಕ ಮಿತ್ರಮಂಡಳಿಯ ಸ್ಥಾಪಕರಲ್ಲಿ ಒಬ್ಬರಾದ ಬಾಲಚಂದ್ರ ರಾವ್ ಅವರು ಕವಿ ಮುದ್ದಣನ ಹುಟ್ಟೂರಾದ ನಂದಳಿಕೆಯಲ್ಲಿ ಮುದ್ದಣ ಸ್ಮಾರಕ ಮಿತ್ರಮಂಡಲಿ ಸ್ಥಾಪಿಸುವ ಮೂಲಕ ಕವಿಯನ್ನು ನೆನಪಿಸುವ ನೂರಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ.

ಕವಿ ಮುದ್ದಣನ ಸಮಗ್ರ ಕಾವ್ಯ ಸಂಪುಟ ಬಿಡುಗಡೆ, ಮುದ್ದಣ–ಮನೋರಮೆಯರ ಸಂಭಾಷಣೆಯ ಡಿವಿಡಿ, ಹುಟ್ಟೂರಿನಲ್ಲಿ ಮುದ್ದಣನ ನೆನಪಿನ ಗ್ರಂಥಾಲಯ, ಮುದ್ದಣ ಸ್ಮಾರಕ, ಮುದ್ದಣನ ಯಕ್ಷಗಾನ ಸಂಪುಟಗಳು, ಪ್ರತಿವರ್ಷ ಕವಿ ಮುದ್ದಣ ದಿನಾಚರಣೆ, ಸ್ಟ್ಯಾಂಪ್ ಬಿಡುಗಡೆ, ಮುದ್ದಣನ ಹೆಸರಿನಲ್ಲಿ ನೂರಾರು ಸಾಹಿತ್ಯಿಕ ಕಾರ್ಯಕ್ರಮಗಳು, ಮುದ್ದಣ ಸ್ಮಾರಕ ಪ್ರಶಸ್ತಿ ಪೀಠ ಸ್ಥಾಪನೆ, ಮಂಗಳೂರು ವಿವಿಯಲ್ಲಿ ಕವಿಯ ನೆನಪಿನ ಅಧ್ಯಯನ ಪೀಠಕ್ಕಾಗಿ ಶ್ರಮಿಸಿದ್ದರು.

ಗುರುವಾರ (ಮೇ 15) ಬೆಳಿಗ್ಗೆ 6ರಿಂದ 10 ಗಂಟೆಯ ವರೆಗೆ ಮಂಗಳೂರಿನ ಬಿಜೈನ ಚೌಟಾಸ್ ಕಂಪೌಡಿನಲ್ಲಿರುವ ಅವರ ಸ್ವಗೃಹದಲ್ಲಿ ಅವರ ಮೃತಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಕಾರ್ಕಳ ತಾಲ್ಲೂಕಿನ ನಂದಳಿಕೆಯ ‘ಐಸಿರಿ’ ಮನೆಯಲ್ಲಿ ಅಂತಿಮ ದರ್ಶನ ಇರುತ್ತದೆ. ಬಳಿಕ ಅಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟಂಬದವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.