ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂತೂರು: ಕಾರು ಅಪಘಾತ ಯುವಕ ಸಾವು

Published 24 ಮಾರ್ಚ್ 2024, 7:27 IST
Last Updated 24 ಮಾರ್ಚ್ 2024, 7:27 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ನಂತೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾರೆ.

ತೊಕ್ಕೊಟ್ಟಿನ ಶಮಿತ್ ಶೆಟ್ಟಿ (29) ಅಪಘಾತದಲ್ಲಿ ಮೃತಪಟ್ಟ ಯುವಕ  ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತ ಯುವಕ ಜಿಲ್ಲೆಯ ಬಿಜೆಪಿ ನಾಯಕಿ ಲಲಿತಾ ಸುಂದ‌ರ್ ಅವರ ಮೊಮ್ಮಗ.

ಸ್ನೇಹಿತನ ಮನೆಯಲ್ಲಿ ನಡೆದಿದ್ದ ದೈವದ ಕೋಲದಲ್ಲಿ ಭಾಗವಹಿಸಿದ್ದ ಶಮಿತ್‌ ಮನೆಗೆ ಮರಳುವಾಗ ಕಾರು ರಾಷ್ಟ್ರೀಯ ಹೆದ್ದಾರಿಯ ಪಕ್ಕ ಅಳವಡಿಸಿದ್ದ ಕಬ್ಬಿಣದ ತಡೆ ಬೇಲಿಗೆ ಢಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ತಡೆಬೇಲಿ ಮುರಿದು ಹೋಗಿದ್ದು, ಮಾರುತಿ ಸುಜುಕಿ ಸಿಯಾಜ್‌ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT