ಬೆಳ್ತಂಗಡಿ: ‘ನಾರಾಯಣ ಗುರುಗಳು ಸಮಾಜದ ಪ್ರೇರಣಾ ಶಕ್ತಿ. ಅವರ ವಿಚಾರಧಾರೆ ಆಧರಿಸಿ ಸಮಾಜದಲ್ಲಿ ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಯುವವಾಹಿನಿ ಪ್ರಯತ್ನಿಸುತ್ತಿರುವುದು ಶ್ಲಾಘನೀಯ. ಸಂಘಟನೆ ಮೂಲಕ ಸಮಾಜ ಉತ್ತಮ ರೀತಿಯಲ್ಲಿ ಸದೃಢವಾಗಿ ಮುಂದುವರಿಯಲಿ’ ಎಂದು ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಹೇಳಿದರು.

ಬೆಳ್ತಂಗಡಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಲನ ಸಮಿತಿ ಸಹಕಾರದಲ್ಲಿ ಬೆಳ್ತಂಗಡಿಯ ಗುರುನಾರಾಯಣ ಸ್ವಾಮಿ ಸಭಾ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಅಂಗವಾಗಿ ನಡೆದ ಗುರುನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷ ಜಯಂತ ಕೋಟ್ಯಾನ್ ಮಾತನಾಡಿ, ‘ವ್ಯಕ್ತಿಯನ್ನು ಸಮಾಜದ ಆಸ್ತಿಯಾಗಿ ಮಾಡುವಲ್ಲಿ ಯುವವಾಹಿನಿ ಕಾರ್ಯ ಶ್ಲಾಘನೀಯ. ನಾರಾಯಣಗುರುಗಳ ಆದರ್ಶವನ್ನು ಸಮಾಜದಲ್ಲಿ ಬೆಳೆಸುವುದೇ ಸಮಾಜಕ್ಕೆ ನೀಡುವ ಕೊಡುಗೆಯಾಗಿದೆ. ಯುವಕರು ಕುಟುಂಬಕ್ಕೆ ಸೀಮಿತವಾಗಿದೆ ನಾರಾಯಣ ಗುರುಗಳ ವಿಚಾರದಡಿ ಬದುಕು ರೂಪಿಸಿಕೊಳ್ಳಬೇಕು’ ಎಂದರು.

ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ. ಮಾತನಾಡಿ, ‘ಎಲ್ಲರ ಬದುಕು ಉತ್ತಮವಾಗಿರಬೇಕು ಎಂಬುದೇ ಯುವವಾಹಿನಿಯ ಕಾಳಜಿಯಾಗಿದೆ’ ಎಂದರು.

ಘಟಕದ ಅಧ್ಯಕ್ಷ ಗುರುರಾಜ್ ಗುರಿಪಲ್ಲ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು, ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಸಾವ್ಯ ಭಾಗವಹಿಸಿದ್ದರು. ಘಟಕದ ಹಿಂದಿನ ಅಧ್ಯಕ್ಷರನ್ನು ಗೌರವಿಸಲಾಯಿತು.

ಮಹಿಳಾ ಸಂಚಲನ ಸಮಿತಿ ಪ್ರಧಾನ ಸಂಚಾಲಕಿ ಲೀಲಾವತಿ ಪಣಕಜೆ ಪ್ರಾರ್ಥಿಸಿದರು. ಘಟಕದ ಮಾಜಿ ಅಧ್ಯಕ್ಷ ಎಂ.ಕೆ.ಪ್ರಸಾದ್ ಸ್ವಾಗತಿಸಿದರು. ಶ್ವೇತಾ ಯುವರಾಜ್ ಕಾರ್ಯಕ್ರಮ ನಿರೂಪಿಸಿದರು. ಘಟಕದ ಪ್ರಧಾನ ಕಾರ್ಯದರ್ಶಿ ಮಧುರಾ ರಾಘವ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.