ಭಾನುವಾರ, ಸೆಪ್ಟೆಂಬರ್ 25, 2022
29 °C

ನಾರಾಯಣ ಗುರು ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಇಲ್ಲಿಯ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜನ್ಮದಿನ ಆಚರಿಸಲಾಯಿತು.

ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ನಗರ ದಕ್ಷಿಣ ಶಾಸಕರಾಗಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿ ವೇದವ್ಯಾಸ್ ಕಾಮತ್ ಹಾಗೂ ಉರ್ಮಿಳಾ ರಮೇಶ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು. ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ಕಾರ್ಯದರ್ಶಿ ವಸಂತ ಕಾರಂದೂರು, ಉಪಾಧ್ಯಕ್ಷರಾದ ಎಂ.ಶೇಖರ್ ಪೂಜಾರಿ, ಡಾ. ಬಿ.ಜಿ. ಸುವರ್ಣ, ಕಾಲೇಜು ಆಡಳಿತ ಮಂಡಳಿಯ ಸದಸ್ಯರು, ಪದವಿ, ಪದವಿ ಪೂರ್ವ, ಬಿ.ಎಡ್. ಎಂಕಾಂ. ವಿಭಾಗದ ಪ್ರಾಂಶುಪಾಲರು ಉಪಸ್ಥಿತರಿದ್ದರು.

ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಗಳ ಡೀನ್ ಡಾ. ಉಮ್ಮಪ್ಪ ಪೂಜಾರಿ ಸ್ವಾಗತಿಸಿದರು. ನಂತರ ಭಜನಾ ಸ್ಪರ್ಧೆ, ಸಂಜೆ ಸಭಾ ಕಾರ್ಯಕ್ರಮ, ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ, ವಿಶೇಷ ಉಪನ್ಯಾಸಗಳ ನಂತರ ಶ್ರೀ ಗುರುಗಳ ಭಾವ ಚಿತ್ರದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭವ್ಯ ಮೆರವಣಿಗೆಯು ನೆರವೇರಿತು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.