ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಪುತ್ತೂರು ಕ್ಷೇತ್ರದಿಂದ 25 ಸಾವಿರ ಮಂದಿ

Last Updated 27 ಆಗಸ್ಟ್ 2022, 2:56 IST
ಅಕ್ಷರ ಗಾತ್ರ

ಪುತ್ತೂರು: ಮಂಗಳೂರಿನ ಕೂಳೂರಿನಲ್ಲಿ ಸೆ.2ರಂದು ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿವಿಧ ಯೋಜನೆಗಳ 10 ಸಾವಿರ ಮಂದಿ ಫಲಾನುಭವಿಗಳು ಹಾಗೂ 15 ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು.

ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಕಾರ್ಯಕ್ರಮಕ್ಕೆ ತೆರಳುವ ಫಲಾನುಭವಿಗಳಿಗೆ ವಾಹನ ಸೌಲಭ್ಯ ಹಾಗೂ ಊಟೋಪಚಾರದ ವ್ಯವಸ್ಥೆಯನ್ನು ತಾಲ್ಲೂಕು ಹಾಗೂ ಜಿಲ್ಲಾಡಳಿತ ಮಾಡಲಿದೆ. ಪಕ್ಷದ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ವಾಹನ ಸೌಲಭ್ಯ ಹಾಗೂ ಊಟದ ವ್ಯವಸ್ಥೆಯನ್ನು ಪಕ್ಷದ ವತಿಯಿಂದ ಮಾಡಲಾಗುವುದು ಎಂದು ಹೇಳಿದರು.

ನರೇಂದ್ರ ಮೋದಿಯವರು ಪ್ರಧಾನಿ ಮಂತ್ರಿಯಾದ ಬಳಿಕ ಎರಡನೇ ಬಾರಿ ಜಿಲ್ಲೆಗೆ ಬರುತ್ತಿದ್ದಾರೆ. ಜಿಲ್ಲೆಗೆ ನೀಡಿದ ಕೊಡುಗೆಗಳ ಹಾಗೂ ಸವಲತ್ತುಗಳ ಪ್ರಯೋಜನ ಪಡೆದ ಫಲಾನುಭವಿಗಳನ್ನು ಕಾರ್ಯಕ್ರಮದಲ್ಲಿ ಜೋಡಿಸಿಕೊಳ್ಳಲಾಗುವುದು. ಜಿಲ್ಲಾಡಳಿತ, ಜಿಲ್ಲೆಯ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಜನಪ್ರತಿನಿಧಿಗಳನ್ನು ಸೇರಿಕೊಂಡು ಕಾರ್ಯಕ್ರಮದ ಯಶಸ್ವಿಗಾಗಿ ಸಿದ್ಧತೆ ನಡೆದಿದೆ ಎಂದರು.

ತಾಲ್ಲೂಕಿನ 220 ಬೂತ್‌ಗಳಿಂದ ಕನಿಷ್ಠ 15,000 ಮಂದಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಅವರನ್ನು ಕರೆದೊಯ್ಯಲು 75 ಖಾಸಗಿ ಬಸ್‌ಗಳು, 100 ಕೆಎಸ್‌ಆರ್‌ಟಿಸಿ ಬಸ್‌ಗಳು ಹಾಗೂ ಮಿನಿ ಬಸ್‌ಗಳನ್ನು ಬಳಸಲಾಗುವುದು. ಜತೆಗೆ ಸುಮಾರು 400ರಷ್ಟು ಖಾಸಗಿ ವಾಹನಗಳು ಇರಲಿವೆ ಎಂದು ಅವರು ಮಾಹಿತಿ ನೀಡಿದರು.

ವಾಹನ, ಊಟ ಸೌಲಭ್ಯ: ಪ್ರಧಾನಿಯವರ ಕಾರ್ಯಕ್ರಮಕ್ಕೆ ತೆರಳುವ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಪಕ್ಷದ ವತಿಯಿಂದ ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನ, ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಳದ ಸಭಾಭವನ, ವಿಟ್ಲದ ಅಕ್ಷಯ ಸಭಾಭವನ, ಮಿತ್ತೂರು ಸೀತಾ ರಾಮಾಂಜನೇಯ ಭಜನಾ ಮಂದಿರ ಹಾಗೂ ಪೆರ್ನೆಯಲ್ಲಿ ಊಟದ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಸಂಜೀವ ಮಠಂದೂರು ತಿಳಿಸಿದರು.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 10ಸಾವಿರ ಮಂದಿ ವಿವಿಧ ಇಲಾಖೆಗಳ ಫಲಾನುಭವಿಗಳು ಇರುವುದಾಗಿ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ. ಈ ಫಲಾನುಭವಿಗಳಿಗೆ ಕಾರ್ಯಕ್ರಮಕ್ಕೆ ತೆರಳಲು ವಾಹನ ಹಾಗೂ ಊಟೋಪಚಾರಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಸಂಬಂಧಪಟ್ಟ ಇಲಾಖೆಗಳ ಮುಖಾಂತರ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯಾಡಳಿತಗಳು, ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮಕರಣಿಕರು ವ್ಯವಸ್ಥೆಗಳನ್ನು ಮಾಡುವರು ಎಂದು ಅವರು ತಿಳಿಸಿದರು.

ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT