ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ವಿದ್ಯಾಗಿರಿಯ ಶಿವರಾಮ ಕಾರಂತ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಶ್ರೀರಾಮಕೃಷ್ಣ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ನಟೇಶ್ ಆಳ್ವ, ಬದುಕು ರೂಪಿಸಿಕೊಳ್ಳುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ ಬಹುಮುಖ್ಯ. ಅನುಭವದೊಂದಿಗೆ ಕಾರ್ಯಪ್ರವೃತ್ತರಾಗಬೇಕು. ನಾಯಕತ್ವದ ಗುಣ, ವೈಚಾರಿಕತೆ, ಉತ್ತಮ ಸಂವಹನ, ವೈಜ್ಞಾನಿಕ ಮನೋಧರ್ಮದಿಂದ ನಮ್ಮನ್ನು ನಾವು ತಿದ್ದಿಕೊಳ್ಳಬೇಕು ಎಂದರು.
ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್ ಮಾತನಾಡಿ, ಇತರರನ್ನು ಸರಿ ದಾರಿಯಲ್ಲಿ ಕೊಂಡೊಯ್ಯುವ ಸೇವಾಗುಣ ನಮ್ಮಲ್ಲಿರಬೇಕು ಎಂದರು.
ಕಾಲೇಜಿನ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕಿ ತ್ರಿವೇಣಿ ವಂದಿಸಿದರು. ಯೋಜನಾಧಿಕಾರಿ ಅರುಣ್ ಕುಮಾರ್ ಸ್ವಾಗತಿಸಿ, ಉಪನ್ಯಾಸಕ ಶ್ರೀಧರ್ ಆರ್.ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.