ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಾಕೃತಿಕ ಅನಾಹುತ: ಸರ್ಕಾರಕ್ಕೆ ಪತ್ರ’

Last Updated 7 ಆಗಸ್ಟ್ 2022, 7:50 IST
ಅಕ್ಷರ ಗಾತ್ರ

ಮಂಗಳೂರು: ಅತಿವೃಷ್ಟಿ ವೇಳೆ ಅರಣ್ಯ ಪ್ರದೇಶಗಳಲ್ಲಿ ಸಂಭವಿಸಿದ ಪ್ರಾಕೃತಿಕ ಅನಾಹುತಗಳ ಕಾರಣ ಪತ್ತೆಗೆ ಭೂಗರ್ಭ ಶಾಸ್ತ್ರಜ್ಞರಿಂದ ಅಧ್ಯಯನ ನಡೆಸುವಂತೆ ವಿನಂತಿಸಿ, ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸುಳ್ಯ ಸೇರಿದಂತೆ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುಡ್ಡ ಕುಸಿದು, ಮಣ್ಣುಮಿಶ್ರಿತ ನೀರು ಪ್ರವಾಹದಂತೆ ಹರಿದಿದೆ. ಕೊಡಗಿನಲ್ಲೂ ಇದೇ ರೀತಿಯ ಪ್ರಾಕೃತಿಕ ವಿಕೋಪ ಉಂಟಾಗಿದೆ. ಸುಳ್ಯದ ಕಲ್ಮಕಾರು, ಸಂಪಾಜೆ ಮತ್ತಿತರ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ ಪ್ರಕರಣ, ಭಾಗಶಃ ಮನೆ ಹಾನಿ ಹಾಗೂ ಪೂರ್ಣ ಮನೆ ಹಾನಿ ಪ್ರಕರಣಗಳಿಗೆ ನಿಗದಿತ ಪರಿಹಾರ ನೀಡಲಾಗುತ್ತಿದೆ.
ಬಾಳಗೋಡು, ಹರಿಹರ ಮತ್ತು ಕಲ್ಮಕಾರುಗಳಲ್ಲಿ ತೊಂದರೆಗೊಳಗಾದ 6,000 ಜನರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. 100ಕ್ಕೂ ಹೆಚ್ಚು ಜನರು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ. ಕಲ್ಮಕಾರಿನಲ್ಲಿ 150ಕ್ಕೂ ಅಧಿಕ ಕುಟುಂಬಗಳು ರಸ್ತೆ ಮಾರ್ಗದ ಸಂಪರ್ಕ ಕಡಿದುಕೊಂಡಿವೆ. ಅಲ್ಲಿಗೆ ತಾತ್ಕಾಲಿಕವಾಗಿ ಮರು ಸಂಪರ್ಕ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT