ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾವೂರು:‌ ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

Published 5 ಮೇ 2024, 15:16 IST
Last Updated 5 ಮೇ 2024, 15:16 IST
ಅಕ್ಷರ ಗಾತ್ರ

ಬಂಟ್ವಾಳ (ದಕ್ಷಿಣ ಕನ್ನಡ): ತಾಲ್ಲೂಕಿನ ನಾವೂರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಭಾನುವಾರ ಸಂಜೆ ಮೃತಪಟ್ಟಿದ್ದಾರೆ.

ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ, ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ಮ ನಾಶಿಯಾ (14 ) ಮೃತ ಬಾಲಕಿಯರು.

ಮೂಲತಃ ನಾವೂರು ನಿವಾಸಿ ಆಗಿರುವ ಇಲಿಯಾಸ್ ಅವರು ಉಳ್ಳಾಲದಲ್ಲಿ ವಾಸವಾಗಿದ್ದು, ಇಲ್ಲಿನ ನಾವೂರು ಸಮೀಪದ ಮೈಂದಾಳದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮನೆಯವರೊಂದಿಗೆ ಭಾನುವಾರ ಸಂಜೆ ಮಕ್ಕಳು ಸ್ಥಳೀಯ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿ ಆಟವಾಡುತ್ತಿದ್ದರು.

ಇದೇ ವೇಳೆ ಮಕ್ಕಳು ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಪೋಷಕರು ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಬಂಟ್ವಾಳ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT