ನೆಲ್ಯಾಡಿ (ಉಪ್ಪಿನಂಡಿ): ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯಲ್ಲಿ 2 ವರ್ಷ ನನೆಗುದಿಗೆ ಬಿದ್ದಿದ್ದ ಚತುಷ್ಪಥ ಕಾಮಗಾರಿಯ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಮೇಲ್ಸೇತುವೆಯ ಒಂದು ಬದಿಯಲ್ಲಿ ವಾಹನ ಸಂಚಾರ ಆರಂಭಗೊಂಡಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುವ ವಾಹನಗಳ ಸಂಚಾರಕ್ಕೆ ಮೇಲ್ಸೇತುವೆಯಲ್ಲಿ ಅವಕಾಶ ಮಾಡಲಾಗಿದೆ.

ಪೆರಿಯಶಾಂತಿಯಿಂದ ಬಿ.ಸಿ.ರೋಡು ವರೆಗಿನ ಹೆದ್ದಾರಿ ಚತುಷ್ಪಥ ಕಾಮಗಾರಿಯನ್ನು ಕೆಎನ್ಆರ್ ಕಂಪನಿ ನಿರ್ವಹಿಸುತ್ತಿದೆ. ನೆಲ್ಯಾಡಿಯ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಒಂದು ವರ್ಷದಿಂದ ಮರು ಪ್ರಾರಂಭಗೊಂಡು ಇದೀಗ ಅಂತಿಮ ಹಂತಕ್ಕೆ ತಲುಪಿದೆ.

ಇಲ್ಲಿ ಪೇಟೆ ಮಧ್ಯೆ ಎರಡು ಕಡೆ ಎತ್ತರದ ತಡೆಗೋಡೆ ನಿರ್ಮಿಸಿ ಮೇಲ್ಸೇತುವೆ ನಿರ್ಮಿಸಲಾಗುತ್ತಿತ್ತು. ಜನರಿಗೆ ಅನುಕೂಲವಾಗುವಂತೆ ಪೇಟೆಯ ಎರಡು ಕಡೆ ಅಂಡರ್ಪಾಸ್ ರಚಿಸಲಾಗಿತ್ತು. ಈ ಕಾಮಗಾರಿ ಬಹುತೇಕ ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ಎತ್ತರಿಸಿದ ಮೇಲ್ಸೇತುವೆಯಿಂದ ನೆಲ್ಯಾಡಿ ಪೇಟೆಯ ವರ್ತಕರಿಗೆ, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬ ಆಕ್ಷೇಪ ವ್ಯಕ್ತವಾಗಿತ್ತು.

ಕಲ್ಲಡ್ಕ ಮಾದರಿಯಲ್ಲೇ ನೆಲ್ಯಾಡಿ ಪೇಟೆಯಲ್ಲೂ ಮೇಲ್ಸೇತುವೆ ನಿರ್ಮಿಸಬೇಕು ಎಂದು ಒತ್ತಾಯಿಸಿ ಹೋರಾಟ ಸಮಿತಿ ರಚಿಸಿ ನೆಲ್ಯಾಡಿಯಲ್ಲಿ ಪ್ರತಿಭಟಿಸಲಾಗಿತ್ತು. ಇದರಿಂದ ಕಾಮಗಾರಿ ಸುಮಾರು 2 ವರ್ಷ ಸ್ಥಗಿತಗೊಂಡಿತ್ತು. ಕಲ್ಲಡ್ಕ ಮಾದರಿ ಮೇಲ್ಸೇತುವೆಗಾಗಿ ಕೇಂದ್ರ ಸಚಿವರಿಗೆ, ರಾಜ್ಯ ಸಚಿವರಿಗೆ, ಸಂಸದರಿಗೆ, ಶಾಸಕರ ಸಹಿತ ಹಲವರಿಗೆ ಹೋರಾಟ ಸಮಿತಿಯಿಂದ ಮನವಿ ಮಾಡಲಾಗಿತ್ತು. ಆದರೆ, ಕಲ್ಲಡ್ಕ ಮಾದರಿ ಮೇಲ್ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ಸಿಗಲಿಲ್ಲ. ಬದಲಾಗಿ ನೆಲ್ಯಾಡಿ ಪೇಟೆಯಲ್ಲಿ ಮೂರು ಹೆಚ್ಚುವರಿ ಅಂಡರ್ಪಾಸ್ಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅನುಮತಿ ನೀಡಿತ್ತು.

ಅದರಂತೆ ಕೆಲ ತಿಂಗಳ ಹಿಂದೆ ನೆಲ್ಯಾಡಿ ಪೇಟೆಯಲ್ಲಿ ಹೆಚ್ಚುವರಿ ಮೂರು ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಇದೀಗ ಈ ಕಾಮಗಾರಿ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಈಗ ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುವ ಎಲ್ಲ ವಾಹನಗಳು ಮೇಲ್ಸೇತುವೆ ಮೂಲಕ ಸಂಚರಿಸುತ್ತಿವೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುವ ವಾಹನಗಳು ಸರ್ವಿಸ್ ರಸ್ತೆ ಮೂಲಕ ಸಂಚರಿಸುತ್ತಿವೆ. ಇನ್ನೊಂದು ತಿಂಗಳೊಳಗೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡು ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಸರ್ವಿಸ್ ರಸ್ತೆ ಶೀಘ್ರ ದುರಸ್ತಿಗೊಳಿಸಲಿ: ಸರ್ವಿಸ್ ರಸ್ತೆಯನ್ನು ಶೀಘ್ರ ಪೂರ್ಣಗೊಳಿಸಬೇಕು. ಚರಂಡಿ ವ್ಯವಸ್ಥೆ ಸರಿಪಡಿಸಬೇಕು. ಮೇಲ್ಸೇತುವೆಯ ಇನ್ನೊಂದು ಬದಿಯಲ್ಲೂ ವಾಹನಗಳ ಓಡಾಟಕ್ಕೆ ಬೇಗ ಅವಕಾಶ ಮಾಡಿಕೊಡಬೇಕು. ಸ್ಥಳೀಯ ಆಟೊ, ಟೂರಿಸ್ಟ್ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಆಗಬೇಕು. ಈ ಮೂಲಕ ನೆಲ್ಯಾಡಿ ಜನತೆಯ ಸಂಕಷ್ಟ ದೂರ ಮಾಡಬೇಕು ಎಂದು ನೆಲ್ಯಾಡಿ ವರ್ತಕರ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್. ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-29-1009857370

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.