ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನೀಶ್ ಕೃಷ್ಣ ಅವರ ಪತ್ನಿ ಮಾನಸ (23) ಸಾವಿಗೀಡಾದವರು. ಗಂಭೀರವಾಗಿ ಗಾಯಗೊಂಡ ಅನಿಶ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ದಂಪತಿ ಪ್ರಯಾಣಿಸುತ್ತಿದ್ದ ಆಲ್ಟೊ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೇರಿ ಇನ್ನೊಂದು ಬದಿಗೆ ಬಿದ್ದಿದೆ. ಈ ಸಂದರ್ಭ ಮಂಗಳೂರಿನಿಂದ ಬಿ.ಸಿ.ರೋಡ್ ಕಡೆಗೆ ಸಾಗುತ್ತಿದ್ದ ಸಾರಿಗೆ ನಿಗಮದ ಬಸ್ಸಿಗೆ ಕಾರು ಬಡಿದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಮಾನಸ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಆಯಿತು.
ಸೆ.5ರಂದು ದೇಂತಡ್ಕ ದೇವಸ್ಥಾನದಲ್ಲಿ ಇವರ ಮದುವೆ ಆಗಿತ್ತು. ಮದುವೆಯಾದ ದೇಂತಡ್ಕ ದೇವಸ್ಥಾನಕ್ಕೆ ದಂಪತಿ ಶನಿವಾರ ಭೇಟಿ ನೀಡಿ ಮಾವನ ಮನೆಗೆ ವಾಪಸಾಗುತ್ತಿದ್ದಾಗ ಅವಘಡ ಸಂಭವಿಸಿದೆ.
ದಂಪತಿ ಮಂಗಳೂರಿನ ಖಾಸಗಿ ಕಂಪೆನಿಯೊಂದರ ಉದ್ಯೋಗಿಗಳು. ಮೆಲ್ಕಾರ್ ಸಂಚಾರಿ ಠಾಣೆ ಪೋಲೀಸರು ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.