ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ₹957.39 ಕೋಟಿ: ನಳಿನ್‌ಕುಮಾರ್

ದ.ಕ. ಜಿಲ್ಲೆಯ 2 ಕಾಮಗಾರಿಗಳಿಗೆ ಕೇಂದ್ರ ಅನುಮೋದನೆ– ನಳಿನ್‌
Published 28 ಡಿಸೆಂಬರ್ 2023, 13:41 IST
Last Updated 28 ಡಿಸೆಂಬರ್ 2023, 13:41 IST
ಅಕ್ಷರ ಗಾತ್ರ

ಮಂಗಳೂರು : ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಸ್ತಾವಗಳ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ₹ 957.39 ಕೋಟಿ ಮೊತ್ತದ ಎರಡು ಭಾರಿ ಕಾಮಗಾರಿಗಳಿಗೆ ಅನುಮೋದನೆ ದೊರೆತಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿವರೆಗಿನ 28.49 ಕಿ.ಮೀ. ದ್ವಿಪಥ ಅಭಿವೃದ್ಧಿ ಯೋಜನೆಗೆ ₹613.65 ಕೋಟಿ ಹಾಗೂ ಚಾರ್ಮಡಿ ಘಾಟಿಯಲ್ಲಿ ಮಂಗಳೂರು- ಮೂಡಿಗೆರೆ- ತುಮಕೂರು ಸೆಕ್ಷನ್‌ನಲ್ಲಿ 11.20 ಕಿ.ಮೀ. ಅಭಿವೃದ್ದಿಗೆ ₹343.73 ಕೋಟಿ ಕಾಮಗಾರಿಗಳಿಗೆ ಕೇಂದ್ರ ಭೂಸಾರಿಗೆ ಸಚಿವಾಲಯ ಅನುಮೋದನೆ ನೀಡಿದ್ದು ಟೆಂಡರ್ ಆಹ್ವಾನಿಸಿದೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿ- ಮೈಸೂರು ರಸ್ತೆ ಚತುಷ್ಪಥ ಕಾಮಗಾರಿಯ (ಒಟ್ಟು 71.60 ಕಿ.ಮೀ) ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಟೆಂಡರ್ ಕರೆಯಲಾಗಿದೆ. ಕಾಮಗಾರಿಗೆ ಅಂದಾಜು ₹1000 ಕೋಟಿಗೂ ಅಧಿಕ ವೆಚ್ಚ ಆಗಬಹುದು ಎಂದು ಅಂದಾಜಿಸಲಾಗಿದ್ದು, ಸಮಗ್ರ ಯೋಜನಾ ವರದಿ ಬಳಿಕ ನಿಖರ ವೆಚ್ಚ ತಿಳಿಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT