ಪುತ್ತೂರು: ಬೆಳ್ತಂಗಡಿ ತಾಲ್ಲೂಕಿನ ವೇಣೂರು ಠಾಣಾ ವ್ಯಾಪ್ತಿಯ ಕುಕ್ಕೇಡಿಯಲ್ಲಿ ಮೂವರ ಸಾವಿಗೆ ಕಾರಣವಾದ ಸುಡುಮದ್ದು ಸ್ಫೋಟ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಮೂಲಕ ತನಿಖೆ ನಡೆಸಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಮೋಹನ್ದಾಸ್ ದೋಳ್ಪಾಡಿ ಆಗ್ರಹಿಸಿದರು.

ಪುತ್ತೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಪಟಾಕಿ, ಸುಡುಮದ್ದಿನಿಂದ ಇಷ್ಟೊಂದು ಭೀಕರ ಸ್ಫೋಟ ಸಂಭವಿಸಲು ಸಾಧ್ಯವಿಲ್ಲ ಎಂಬ ಅನುಮಾನ ಉಂಟಾಗಿದೆ. ಹಾಗಾಗಿ ಸ್ಥಳೀಯ ಪೊಲೀಸರ ತನಿಖೆಯಿಂದ ಇದರ ಮೂಲ ಹುಡುಕುವ ಕೆಲಸ ಅಸಾಧ್ಯವಾಗಿದೆ. ತನಿಖಾದಳವೇ ಈ ತನಿಖೆ ಕೈಗೊಂಡರೆ ಮೂಲ ಹುಡುಕಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಇಂಥ ಘಟನೆ ಮರುಕಳಿಸದಂತೆ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿ ಸಮಿತಿ ಸದಸ್ಯ ಅಜಿತ್ ರೈ ಹೊಸಮನೆ, ಜಿಲ್ಲಾ ಸಹ ಸಂಯೋಜಕರಾದ ಅನೂಪ್ ಕುಮಾರ್ ಸುಳ್ಯ, ನಿರಂಜನ್ ವೇಣೂರು, ದಿನೇಶ್ ಪಂಜಿಗ ಸುದ್ದಿಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.