ಭಾನುವಾರ, ನವೆಂಬರ್ 1, 2020
20 °C

ನೈಜೀರಿಯಾ ಪ್ರಜೆಗೆ ಅನುಶ್ರೀ ಗೊತ್ತು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ನೈಜೀರಿಯಾ ಪ್ರಜೆಗೂ ನಟಿ, ನಿರೂಪಕಿ ಅನುಶ್ರೀ ಪರಿಚಯ ಇದೆ. ಬೆಂಗಳೂರಿನಲ್ಲಿ ನಡೆದ ಡ್ರಗ್ಸ್‌ ಪಾರ್ಟಿಗಳಲ್ಲಿ ಅನುಶ್ರೀಯನ್ನು ನೋಡಿರುವುದಾಗಿ ಈತ ಹೇಳಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈಗಾಗಲೇ ಬಂಧಿತಳಾಗಿರುವ ಕಿಶೋರ್ ಗೆಳತಿ ಆಸ್ಕಾಳಿಗೂ ಅನುಶ್ರೀ ಪರಿಚಯವಿದೆ. ಅಲ್ಲದೇ ತರುಣ್‌ ರಾಜ್‌ ಕೂಡ ಅನುಶ್ರೀ ಪಾರ್ಟಿಯಲ್ಲಿ ಭಾಗವಹಿಸುತ್ತಿದ್ದರು ಎನ್ನುವ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಅನುಶ್ರೀ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳು ದಟ್ಟವಾಗಿವೆ.

ಬೆಂಗಳೂರು ಮೂಲದ ಕೊರಿಯೋಗ್ರಫರ್‌ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಈತ ಹಲವು ನಟಿಯರ ಹೆಸರನ್ನು ಹೇಳಿದ್ದಾನೆ ಎಂದು ತಿಳಿದು ಬಂದಿದೆ.

ಚೈನ್‌ ಲಿಂಕ್‌: ನೈಜೀರಿಯಾ ಪ್ರಜೆಯಿಂದ ಮುಂಬೈನಲ್ಲಿದ್ದ ಶಾನ್‌ಗೆ ಡ್ರಗ್ಸ್‌ ಪೂರೈಕೆಯಾಗುತ್ತಿತ್ತು. ಅಲ್ಲಿಂದ ಮೊಹಮ್ಮದ್ ಶಾಕೀರ್‌ ಮೂಲಕ ತರುಣ್‌ರಾಜ್‌, ಕಿಶೋರ್ ಶೆಟ್ಟಿಗೆ ಡ್ರಗ್ಸ್ ಸರಬರಾಜು ಆಗುತ್ತಿತ್ತು ಎನ್ನುವ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು