ಶನಿವಾರ, ಏಪ್ರಿಲ್ 4, 2020
19 °C

ಮಂಗಳೂರು | ಕೇಂದ್ರ ಮಾರುಕಟ್ಟೆಯಲ್ಲಿ‌‌ ಸಾರ್ವಜನಿಕರ‌ ಖರೀದಿಗೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ಕೇಂದ್ರ ಮಾರುಕಟ್ಟೆಯಲ್ಲಿ ಚಿಲ್ಲರೆ ಮಾರಾಟಗಾರರು ಮಾತ್ರ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಖರೀದಿ ಮಾಡಬಹುದು. ಸಾರ್ವಜನಿಕರು‌ ಈ ಮಾರುಕಟ್ಟೆಯಲ್ಲಿ ಖರೀದಿ ಮಾಡುವಂತಿಲ್ಲ ಎಂದು ಜಿಲ್ಲಾ ಉಸ್ತುವಾರಿ‌ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಚಿಲ್ಲರೆ ಮಾರಾಟಗಾರರು ತಮ್ಮ ಪ್ರದೇಶಗಳ‌ ವ್ಯಾಪ್ತಿಯ ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡಬೇಕು. ಜನರು ತಮ್ಮ ಹತ್ತಿರದ ಅಂಗಡಿಗಳಲ್ಲಿ ಬೆಳಿಗ್ಗೆ 6 ರಿಂದ 12 ರವರೆಗೆ ಮಾತ್ರ ಖರೀದಿ ಮಾಡಬಹುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು