ಸೋಮವಾರ, ನವೆಂಬರ್ 30, 2020
26 °C
ಮಾದರಿ ವಾರ್ಡ್‌ ಸಮಿತಿಗೆ ಪೌರ ಸಮಿತಿ ಮನವಿ

ವಾರ್ಡ್ ಸಮಿತಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಇಲ್ಲ: ಪೌರ ಸಮಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಪಾಲಿಕೆ ವ್ಯಾಪ್ತಿಯ ವಾರ್ಡ್ ಸಮಿತಿಗಳಲ್ಲಿ ಯಾವುದೇ ಪಕ್ಷದ ಕಾರ್ಯಕರ್ತರಿಗೆ ಅವಕಾಶವಿಲ್ಲ. ಈ ಸಮಿತಿಯಲ್ಲಿ ಪಾಲಿಕೆ ಸದಸ್ಯರು ಅಧ್ಯಕ್ಷರಾಗಿದ್ದು, 10 ಮಂದಿ ಸದಸ್ಯರಿರುತ್ತಾರೆ. ಅವಿರೋಧ ಆಯ್ಕೆ ಅಥವಾ ಚುನಾವಣೆ ಮೂಲಕ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲು ಅವಕಾಶವಿದೆ ಎಂದು ಮಂಗಳೂರು ಮಹಾನಗರ ಪೌರ ಸಮಿತಿ ತಿಳಿಸಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಚಂದ್ರು, 60 ವಾರ್ಡ್‌ಗಳ ಯಾವುದೇ ಸಮಿತಿಯಲ್ಲಿ ಪಕ್ಷದ ಕಾರ್ಯಕರ್ತರಿದ್ದರೆ ಅಂಥವರ ಸದಸ್ಯತ್ವ ಅನರ್ಹಗೊಳಿಸಲು ಹೋರಾಟ ಮಾಡಲಾಗುವುದು ಎಂದರು.

ವಾರ್ಡ್ ಸಮಿತಿ ರಚಿಸಲು ಸರ್ಕಾರ ಆದೇಶಿಸಿ 23 ವರ್ಷಗಳಾಗಿವೆ. ತಡವಾಗಿಯಾದರೂ ಮಂಗಳೂರು ಮನಪಾ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿ ರಚನೆಯಾಗುತ್ತಿರುವುದು ಸ್ವಾಗತಾರ್ಹ. ಎಲ್ಲ 60 ವಾರ್ಡ್‌ಗಳಲ್ಲಿ ವಾರ್ಡ್ ಸಮಿತಿ ರಚನೆಯಾಗುವ ಮೂಲಕ ಸುಂದರ ಮಹಾನಗರ ನಿರ್ಮಾಣಕ್ಕೆ ಜನರ ಬೆಂಬಲ ನೀಡಬೇಕು ಎಂದು ಸಮಿತಿಯ ಮುಖಂಡ ಎಂ.ಜಿ. ಹೆಗಡೆ ಮನವಿ ಮಾಡಿದರು.

ಸಮಿತಿ ರಚನೆಗೆ ಸಂಬಂಧಿಸಿದಂತೆ ಹಲವು ವರ್ಷಗಳ ಕಾನೂನು ಹೋರಾಟಕ್ಕೆ ಜಯ ಲಭಿಸಿದೆ. ಉತ್ತಮ ವ್ಯಕ್ತಿಗಳನ್ನ ಆಯ್ಕೆ ಮಾಡಿ ವಾರ್ಡ್‌ನ ಸರ್ವತೋಮುಖ ಅಭಿವೃದ್ಧಿ ಮಾಡಲು ಸಾಧ್ಯವಿದೆ. ಸಮಿತಿಯ ಅನುಮತಿ ಇಲ್ಲದೆ ವಾರ್ಡ್‌ನಲ್ಲಿ ಯಾವುದೇ ಕೆಲಸಗಳು ಆಗುವುದಿಲ್ಲ. ದೇಶಕ್ಕೆ ಮಾದರಿಯಾಗುವ ವಾರ್ಡ್ ಕಮಿಟಿ ನಿರ್ಮಿಸಲು ಸಾಧ್ಯವಿದೆ ಎಂದು ತಿಳಿಸಿದರು.

ಸಮಿತಿಯ ಅಧ್ಯಕ್ಷ ಎಸ್.ಪಿ.ಚಂಗಪ್ಪ, ಪದಾಧಿಕಾರಿಗಳಾದ ಪದ್ಮನಾಭ ಉಳ್ಳಾಲ್, ಸ್ಟ್ಯಾನಿ ಅಲ್ವಾರಿಸ್, ಮೋಹನ್ ಪಚ್ಚನಾಡಿ, ಶಿವಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.