ಮಂಗಳೂರು: ‘ಹಿಂದೂ ಕಾರ್ಯಕರ್ತರ ಸಾವನ್ನು ಯಾವುದೇ ರಾಜಕೀಯ ಪಕ್ಷ ರಾಜಕಾರಣಕ್ಕೆ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆ’ ಎಂದು ಹಿಂದೂ ಮಹಾಸಭಾ ಕರ್ನಾಟಕ ಸಂಘಟನೆಯ ಸಂಸ್ಥಾಪಕ ರಾಜೇಶ್ ಪವಿತ್ರನ್ ಹೇಳಿದರು.

ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ಪೊಲೀಸ್ ತನಿಖೆ ನಡೆಸಬೇಕು. ಜೊತೆಗೆ ಹತ್ಯೆ ಹಿಂದಿರುವ ಎಲ್ಲಾ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕು. ಸುಹಾಸ್ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಇದುವರೆಗೆ ನಡೆದ ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣಗಳನ್ನು ಮರು ತನಿಖೆಗೆ ಒಳಪಡಿಸಬೇಕು. ಆಗ ಮಾತ್ರ ಈ ಕೊಲೆಗಳ ಹಿಂದೆ ಇರುವ ರಾಜಕೀಯ ಷಡ್ಯಂತ್ರ ಬಯಲಾಗುತ್ತವೆ ಎಂದರು.

‘ಕುಡುಪುವಿನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರ ಇಲ್ಲದೆ ಇದ್ದರೂ 23 ಜನರನ್ನು ಬಂಧಿಸಲಾಗಿದೆ. ಆದರೆ ಸುಹಾಸ್ ಹತ್ಯೆಯಲ್ಲಿ ಹಲವು ಸಾಕ್ಷ್ಯಾಧಾರಗಳಿದ್ದರೂ ಇದುವರೆಗೆ 8 ಜನರ ಬಂಧನ ಮಾತ್ರ ಆಗಿದೆ. ಈ ಕಾರಣಕ್ಕೆ ದಕ್ಷಿಣ ಕನ್ನಡದ ಬಿಜೆಪಿ ಶಾಸಕರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿರುವುದು ತಪ್ಪಲ್ಲ’ ಎಂದರು.

ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯ ಘಟಕದ ಅಧ್ಯಕ್ಷ ಎಲ್.ಕೆ. ಸುವರ್ಣ, ಖಜಾಂಚಿ ಲೋಕೇಶ್ ಉಳ್ಳಾಲ, ಜಿಲ್ಲಾ ಘಟಕದ ಕಾರ್ಯದರ್ಶಿ ಗುರುರಾಜ್, ಮಂಗಳೂರು ಗ್ರಾಮಾಂತರ ಘಟಕದ ಪ್ರಮುಖ ಕಿರಣ್ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.