ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ | ನಿರ್ಬಂಧ ಇಲ್ಲ, ಎಚ್ಚರ ಇರಲಿ: ಸಚಿವ ದಿನೇಶ್‌ ಗುಂಡೂರಾವ್‌

Published 23 ಡಿಸೆಂಬರ್ 2023, 5:13 IST
Last Updated 23 ಡಿಸೆಂಬರ್ 2023, 5:13 IST
ಅಕ್ಷರ ಗಾತ್ರ

ಮಂಗಳೂರು: ‘ಕೋವಿಡ್‌ ವಿಚಾರವಾಗಿ ರಾಜ್ಯದಲ್ಲಿ ಯಾವುದೇ ನಿರ್ಬಂಧ ವಿಧಿಸಿಲ್ಲ. ಮಾಸ್ಕ್‌ ಧರಿಸುವುದೂ ಸೇರಿದಂತೆ ಯಾವುದನ್ನೂ ಕಡ್ಡಾಯಗೊಳಿಸಿಲ್ಲ. ಆದರೆ, ಜನರು ಎಚ್ಚರದಿಂದ ಇರುವುದು ಸೂಕ್ತ’ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಸಲಹೆ ನೀಡಿದರು.

ಕೋವಿಡ್‌ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವೈದ್ಯರ ಜೊತೆಗೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾಹಿತಿ ಪಡೆದ ಅವರು, ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಮಾಸ್ಕ್‌ ಧರಿಸುವುದು ಕಡ್ಡಾಯವಲ್ಲ. ಹಿರಿಯ ನಾಗರಿಕರು, ಬೇರೆ ಆರೋಗ್ಯ ಸಮಬಂಧಿ ಸಮಸ್ಯೆ ಇರುವವವರು ಹೆಚ್ಚು ಜನಸಂದಣಿಯ ಪ್ರದೇಶಗಳಿಗೆ ಹೋದಾಗ ಮಾಸ್ಕ್‌ ಧರಿಸುವುದು ಸೂಕ್ತ. ಮದುವೆ–ಮುಂಜಿ ಮುಂತಾದ ಯಾವ ಕಾರ್ಯಕ್ರಮಕ್ಕೂ ಸರ್ಕಾರ ಯಾವುದೇ ನಿರ್ಬಂಧ ಹೇರಿಲ್ಲ. ಮುಂದಿನ ಸೋಮವಾರ– ಮಂಗಳವಾರದೊಳಗೆ ಮುಖ್ಯಮಂತ್ರಿ ಜೊತೆ ಸಭೆ ನಡೆಸಿ, ಮಾರ್ಗಸೂಚಿ ತಯಾರಿಸಲಾಗುವುದು. ಅದನ್ನು ಆರೋಗ್ಯ ಇಲಾಖೆ ಮಾತ್ರವಲ್ಲ, ಖಾಸಗಿ ಆಸ್ಪತ್ರೆಗಳವರೂ ಪಾಲಿಸಬೇಕಾಗುತ್ತದೆ ಎಂದರು.

ಸದ್ಯ ಗಡಿಭಾಗದ ಜಿಲ್ಲೆಗಳಿಗೆ ನಿತ್ಯ 330 ಹಾಗೂ ರಾಜ್ಯದಲ್ಲಿ ಒಟ್ಟಾರೆ 5 ಸಾವಿರ ಕೋವಿಡ್‌ ತಪಾಸಣೆಯ ಗುರಿ ನಿಗದಿಮಾಡಲಾಗಿದೆ. ಪರಿಸ್ಥಿತಿ ನೋಡಿಕೊಂಡು ಅಗತ್ಯವೆನಿಸಿದರೆ ಅದನ್ನು ಹೆಚ್ಚಿಸಲಾಗುವುದು. ಗೋವಾ ಹಾಗೂ ಕೇರಳ ರಾಜ್ಯದವರು ಈಗಾಗಲೇ ವಂಶವಾಹಿ ಸಂರಚನೆ ವಿಶ್ಲೇಷಣೆ ನಡೆಸಿದ್ದಾರೆ. ಸುಮಾರು 95 ಮಾದರಿಗಳ ಸಂರಚನೆ ವಿಶ್ಲೇಷಣೆಗೆ ₹10 ಲಕ್ಷ ವೆಚ್ಚ ಬರುತ್ತದೆ. ರಾಜ್ಯದ ಸ್ಥಿತಿಯನ್ನು ನೋಡಿಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೋವಿಡ್‌ನ ಈಗಿನ ಜೆಎನ್‌.1 ತಳಿಯು ಹೆಚ್ಚು ಅಪಾಯಕಾರಿ ಅಲ್ಲ ಎಂದು ತಜ್ಞರು ಹೇಳಿದ್ದಾರೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕೇರಳ ಮತ್ತು ಕರ್ನಾಟಕದಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವುದರಿಂದ ಆರೋಗ್ಯ ಇಲಾಖೆಯನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗುವುದು. ಆ ಮೂಲಕ ಇಲಾಖೆಯನ್ನು ಚುರುಕುಗೊಳಿಸಿದಂತೆಯೂ ಆಗುತ್ತದೆ. ಅಗತ್ಯ ಪರಿಕರಗಳ ಖರೀದಿ ಪ್ರಕ್ರಿಯೆ ಶನಿವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT