ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆಗಳಿಗೆ ಆಕ್ಸಿಜನ್ ಕೊರತೆ ಇಲ್ಲ: ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಡಿಸಿ

Last Updated 10 ಸೆಪ್ಟೆಂಬರ್ 2020, 1:37 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಸಾಕಷ್ಟು ಆಕ್ಸಿಜನ್ ಪೂರೈಕೆಯಾಗುತ್ತಿದ್ದು, ಯಾವುದೇ ಸಮಸ್ಯೆ ಇಲ್ಲ. ಸಾರ್ವಜನಿಕರು ಈ ಬಗ್ಗೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಬುಧವಾರ ವೈದ್ಯಕೀಯ ಆಮ್ಲಜನಕ ಪೂರೈಕೆದಾರರೊಂದಿಗೆ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಹಾಗೂ ಸಿಲಿಂಡರ್‌ಗಳು ನಿರಂತರವಾಗಿ ಪೂರೈಕೆಯಾಗಲು ಆಕ್ಸಿಜನ್ ತಯಾರಿಕಾ ಘಟಕಗಳಿಗೆ ಅವಶ್ಯವಿರುವ ಎಲ್ಲ ರೀತಿಯ ನೆರವನ್ನು ಜಿಲ್ಲಾಡಳಿತ ಒದಗಿಸಲಿದೆ. ಆಕ್ಸಿಜನ್ ತಯಾರಿಕಾ ಘಟಕಗಳಿಗೆ ಯಾವುದೇ ಅಡಚಣೆ ಇಲ್ಲದೇ, ನಿರಂತರ ವಿದ್ಯುತ್ ಪೂರೈಕೆ ಮಾಡಲು ಮೆಸ್ಕಾಂಗೆ ಸೂಚಿಸಲಾಗಿದೆ ಎಂದು ಹೇಳಿದರು.

ಆಕ್ಸಿಜನ್ ಘಟಕಗಳಿಗೆ ಕೇರಳದ ಪಾಲ್ಘಾಟ್‌ನಿಂದ ಕಚ್ಚಾ ವಸ್ತುಗಳು ಪೂರೈಕೆಯಾಗುತ್ತಿವೆ. ಬಳ್ಳಾರಿ ತೋರಣಗಲ್‌ನಿಂದಲೂ ಕಚ್ಚಾ ವಸ್ತು ದೊರಕುತ್ತಿದ್ದು, ಈ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿ ಜೊತೆ ಸಮಾಲೋಚಿಸಿ, ಅಲ್ಲಿಂದ ಜಿಲ್ಲೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆಕ್ಸಿಜನ್ ತಯಾರಿಕಾ ಘಟಕಗಳು ಮೊದಲು ಆಸ್ಪತ್ರೆಗಳಿಗೆ ಆದ್ಯತೆಯಲ್ಲಿ ಸರಬರಾಜು ಮಾಡಿ, ನಂತರವಷ್ಟೇ ಕೈಗಾರಿಕೆಗಳಿಗೆ ಪೂರೈಸಬೇಕು ಎಂದು ಸೂಚಿಸಿದರು. ಸಹಾಯಕ ಔಷಧ ನಿಯಂತ್ರಕ ರಮಾಕಾಂತ್, ಆಕ್ಸಿಜನ್ ಪೂರೈಕೆ ಘಟಕಗಳ ಉದ್ಯಮಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT