ಶನಿವಾರ, ಫೆಬ್ರವರಿ 29, 2020
19 °C

ಎನ್‌ಎಸ್‌ಜಿ ಕಮಾಂಡೊಗಳಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ತನಿಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಇಲ್ಲಿನ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್ ಪತ್ತೆಯಾದ ಪ್ರಕರಣದ ತನಿಖೆಗೆ ರಾಷ್ಟ್ರೀಯ ಭದ್ರತಾ ದಳದ (ಎನ್ಎಸ್‌ಜಿ) ತಂಡ ಮಂಗಳವಾರ ಬಂದಿದೆ.

ಬೆಂಗಳೂರಿನಿಂದ 16 ಜನರ ತಂಡ ಮಂಗಳವಾರ ಬೆಳಿಗ್ಗೆ ಬಂದಿದ್ದು, ಬಾಂಬ್ ಪತ್ತೆಯಾದ ಸ್ಥಳದ ಪರಿಶೀಲನೆ ನಡೆಸುತ್ತಿದೆ. ಎನ್ಎಸ್‌ಜಿಯ 27ನೇ ಬೆಟಾಲಿಯನ್‌ನ ತಂಡ ಇದು ಎಂಬ ಮಾಹಿತಿ ಲಭ್ಯವಾಗಿದೆ.

ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದೆ. ಈ ತಂಡ ಬಾಂಬ್ ನಾಶಪಡಿಸಿದ ಸ್ಥಳದಲ್ಲಿ ಮಾದರಿಗಳನ್ನೂ ಸಂಗ್ರಹಿಸುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.

ಎನ್ಐಎ ತಂಡ‌ ದೌಡು: ಬಾಂಬ್ ಸ್ಫೋಟಿಸಲು ಯತ್ನಿಸಿದ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ತಂಡಕ್ಕೆ (ಎನ್ಐಎ) ವರ್ಗಾವಣೆ ಆಗುವ ಸಾಧ್ಯತೆ ಇದೆ. ಎನ್ಐಎ ಅಧಿಕಾರಿಗಳ ತಂಡವೂ ಮಂಗಳೂರಿಗೆ ದೌಡಾಯಿಸಿದೆ.

ಎನ್ಐಎ ಅಧಿಕಾರಿಗಳು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು