ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಅಶ್ವತ್ಥ ನಾರಾಯಣ ರಾಜೀನಾಮೆಗೆ ಒತ್ತಾಯ

Last Updated 6 ಮೇ 2022, 15:51 IST
ಅಕ್ಷರ ಗಾತ್ರ

ಮಂಗಳೂರು: ಪಿಎಸ್‍ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸುವ ಬದಲು, ಪಾರದರ್ಶಕ ತನಿಖೆ ನಡೆಸಬೇಕು ಹಾಗೂ ಸಚಿವ ಡಾ. ಅಶ್ವತ್ಥ ನಾರಾಯಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ, ಎನ್‍ಎಸ್‍ಯುಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಕ್ಲಾಕ್ ಟವರ್ ಎದುರು ಪ್ರತಿಭಟನೆ ನಡೆಸಲಾಯಿತು.

ಎನ್‍ಎಸ್‍ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸವಾದ್ ಸುಳ್ಯ ಮಾತನಾಡಿ, ‘ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಶ್ವತ್ಥ ನಾರಾಯಣ ಪಾತ್ರವಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಪರೀಕ್ಷೆಯಲ್ಲಿ 5ನೇ ರ್‍ಯಾಂಕ್ ಬಂದಿರುವ ದರ್ಶನ್ ಗೌಡ ಹಾಗೂ 10ನೇ ರ್‍ಯಾಂಕ್ ಬಂದಿರುವ ನಾಗೇಶ್ ಗೌಡ ಎಂಬುವವರು ಅಶ್ವತ್ಥ ನಾರಾಯಣ ಅವರ ಸಂಬಂಧಿಕರು. ಈ ಇಬ್ಬರನ್ನು ವಿಚಾರಣೆಗೆ ಕರೆದು, ಬಿಟ್ಟು ಕಳಿಸಿದ್ದಾರೆ. ಉಳಿದವರ ಬಂಧನವಾಗಿದೆ. ಅಶ್ವತ್ಥ ನಾರಾಯಣ ಅವರ ಮೇಲೆ ಭ್ರಷ್ಟಾಚಾರದ ತೂಗುಗತ್ತಿ ನೇತಾಡುತ್ತಿದೆ. ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡಬೇಕು’ ಎಂದು ಒತ್ತಾಯಿಸಿದರು.

ಎನ್‍ಎಸ್‍ಯುಐ ರಾಜ್ಯ ಘಟಕದ ಉಪಾಧ್ಯಕ್ಷ ಫಾರೂಕ್ ಬಯಾಬೆ, ಶ್ವಾನ್ ಸಿರಿ, ನಿಖಿಲ್ ಶೆಟ್ಟಿ, ಬಾತೀಶ್ ಅಳಕೆಮಜಲು, ಶಕೀಲ್ ಉಳ್ಳಾಲ, ಶಾಹೀಲ್ ಎ.ಕೆ, ನಿಖಿಲ್ ಪೂಜಾರಿ, ಕೀರ್ತನ್ ಗೌಡ ಕೊಡಪಾಲ, ಕ್ರಿಸ್ಟನ್, ಅಝೀಮ್, ಉಬೈಸ್, ಸಫ್ವಾನ್ ಕುದ್ರೋಳಿ, ಭರತ್, ಅಖಿನೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT