ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ ನಳಿನ್ ಮನೆಗೆ ಮುತ್ತಿಗೆ ಯತ್ನ: ಎನ್ಎಸ್‌ಯುಐ ಕಾರ್ಯಕರ್ತರು ವಶಕ್ಕೆ

Published 8 ಫೆಬ್ರುವರಿ 2024, 8:35 IST
Last Updated 8 ಫೆಬ್ರುವರಿ 2024, 8:35 IST
ಅಕ್ಷರ ಗಾತ್ರ

ಮಂಗಳೂರು: 'ದಕ್ಷಿಣ ಕನ್ನಡ ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿಲ್ಲ' ಎಂದು ಆರೋಪಿಸಿ ಎನ್ಎಸ್‌ಯುಐ ಕಾರ್ಯಕರ್ತರು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನೆಗೆ ಮುತ್ತಿಗೆ ಹಾಕಲು ಗುರುವಾರ ಯತ್ನಿಸಿದರು.

ಈ ಬಗ್ಗೆ ಮೊದಲೇ ಮಾಹಿತಿ ಪಡೆದಿದ್ದ ಉರ್ವ ಠಾಣೆಯ ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ.

ನಳಿನ್ ಮನೆಯ ಬಳಿ ಬ್ಯಾರಿಕೇಡ್ ಅಳವಡಿಸಿದ್ದ ಪೊಲೀಸರು ಎನ್ಎಸ್‌ಯುಐ ಕಾರ್ಯಕರ್ತರು ಮನೆಯನ್ನು ತಲುಪುವ ಮುನ್ನವೇ ಅವರನ್ನು ವಶಕ್ಕೆ ಪಡೆದರು. ಪೊಲೀಸರ ಕ್ರಮಕ್ಕೆ ಎನ್ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ ಆಕ್ರೋಶ ವ್ಯಕ್ತಪಡಿಸಿದರು.

ಕೆಲವು ಕಾರ್ಯಕರ್ತರು 'ನಳಿನ್ ಹಠಾವೋ ದೇಶ್ ಬಚಾವೋ' ಎಂದು ಘೋಷಣೆ ಕೂಗುತ್ತಾ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದರು. ಅದಕ್ಕೂ ಪೊಲೀಸರು ಅವಕಾಶ ಕೊಡಲಿಲ್ಲ. ಸುಮಾರು 25 ಮಂದಿ ಎನ್ಎಸ್‌ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು. ಭದ್ರತೆಗಾಗಿ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT