ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Published 11 ಡಿಸೆಂಬರ್ 2023, 15:43 IST
Last Updated 11 ಡಿಸೆಂಬರ್ 2023, 15:43 IST
ಅಕ್ಷರ ಗಾತ್ರ

ಮಂಗಳೂರು: ನಗರದ ಹೊರವಲಯದ ವಳಚ್ಚಿಲ್‌ನ ನರ್ಸಿಂಗ್ ಕಾಲೇಜೊಂದರ ಪ್ರಥಮ ವರ್ಷದ ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕೇರಳ ಅಲೆಪ್ಪಿಯ ಸಚಿನ್ ಸಾಜು (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನವೆಂಬರ್ 30ರಂದು ನರ್ಸಿಂಗ್ ಕಾಲೇಜಿಗೆ ಪ್ರವೇಶ ಪಡೆದಿದ್ದ ಸಚಿನ್, ರೂಮ್‌ಮೇಟ್‌ಗಳ ಜೊತೆಗೆ ಆರೋಗ್ಯ ತೊಂದರೆಯ ಕಾರಣ ನೀಡಿ, ಕೆಲವು ದಿನಗಳಿಂದ ತರಗತಿಗೆ ಹಾಜರಾಗದೆ ಹಾಸ್ಟೆಲ್‌ನಲ್ಲೇ ಇದ್ದರು. ಡಿ.8ರಂದು ಉಳಿದ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ವೇಳೆ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂಗಳೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT