ಯಾವುದೇ ಧರ್ಮ ಅಥವಾ ಜಾತಿ ಮೇಲೆ ದ್ವೇಷದ ರಾಜಕಾರಣ ಮಾಡಲ್ಲ. ರಾಜ್ಯದ ಕಾನೂನು ಸುವ್ಯವಸ್ಥೆಗೆ ಯಾರೇ ಧಕ್ಕೆ ತಂದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಾನೂನು ಉಲ್ಲಂಘಿಸಿ ಕ್ರಿಮಿನಲ್ ಕೆಲಸ ಮಾಡುವುದು. ಆಮೇಲೆ ಧರ್ಮದ ಹೆಸರು ಹೇಳುವುದು ತಪ್ಪಲ್ಲವೇ?
-ಸಿದ್ದರಾಮಯ್ಯ, ಮುಖ್ಯಮಂತ್ರಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಎಸ್.ಪಿ ಅರುಣ್ ಕೆ. ಪ್ರಾಮಾಣಿಕ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ಇದೆ. ಇದೊಂದು ಫಲಪ್ರದ ಭೇಟಿ.
ಸತೀಶ್ ಕುಂಪಲ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ