ಪುತ್ತೂರು: ಪುತ್ತೂರಿನ ಸಿವಿಲ್ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ನೋಟಿಸ್ ಜಾರಿಗೆ ಹೋಗಿದ್ದ ನ್ಯಾಯಾಲಯ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆಯೊಡ್ಡಿದ್ದ ಆರೋಪಿಗೆ ಪುತ್ತೂರು ನ್ಯಾಯಾಲಯ ಒಂದು ವರ್ಷ ಜೈಲು ಮತ್ತು ದಂಡ ವಿಧಿಸಿದೆ.

ಹರೀಶ್ ಗೌಡ ಶಿಕ್ಷೆಗೆ ಗುರಿಯಾದವರು. ವಿಚಾರಣೆ ನಡೆಸಿದ ಪುತ್ತೂರು ನ್ಯಾಯಾಲಯದ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ ಅವರು ಆರೋಪಿಗೆ 1 ವರ್ಷ ಸಾದಾ ಜೈಲು ಶಿಕ್ಷೆ ಮತ್ತು ₹ 500 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಒಂದು ತಿಂಗಳ ಹೆಚ್ಚುವರಿ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.

ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣದ ಪ್ರತಿವಾದಿಗಳಾದ ಜಾನಕಿ, ತಿಮ್ಮಕ್ಕ, ಜಯಂತಿ ಅವರಿಗೆ ಹುಕುಂ ನೋಟಿಸ್ ಜಾರಿಗಾಗಿ 2021ರ ಮಾ.25ರಂದು ಹಿರೇಬಂಡಾಡಿ ಗ್ರಾಮದ ಮಡಮ್ಮಾರು ಎಂಬಲ್ಲಿ ಹೋಗಿದ್ದರು. ವೇಳೆ ಆ ಮನೆಯಲ್ಲಿದ್ದ ಹರೀಶ್ ಗೌಡ ಎಂಬಾತ ವಿಚಿತ್ರವಾಗಿ ವರ್ತಿಸಿದ್ದ. ನನ್ನ ಮೇಲೆ ದೇವರು ಬಂದಿದ್ದಾನೆ ಎಂದು ನರ್ತಿಸುತ್ತಾ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆಯೊಡ್ಡಿದ್ದಾರೆ ಎಂದು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಿಬ್ಬಂದಿ ಈರಣ್ಣ ಮಲದಾರ ಅವರು ನೀಡಿದ್ದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆಗಿನ ಉಪನಿರೀಕ್ಷಕ ಕುಮಾರ್ ಕಾಂಬ್ಳೆ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಕವಿತಾ ಪಿ. ವಾದಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.