ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಯೂರು ಶ್ರೀಗಳ ಜನ್ಮದಿನೋತ್ಸವ, ಗ್ರಾಮೋತ್ಸವ, ಗುರುವಂದನ ನಾಳೆಯಿಂದ

Last Updated 7 ಆಗಸ್ಟ್ 2022, 6:26 IST
ಅಕ್ಷರ ಗಾತ್ರ

ವಿಟ್ಲ: ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದಲ್ಲಿ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿ ವತಿಯಿಂದ ಶ್ರೀಗಳ ಜನ್ಮದಿನೋತ್ಸವ ಗ್ರಾಮೋತ್ಸವ 2022- ಗುರುವಂದನ, ಶ್ರೀಮಾತಾ ಅನ್ನಛತ್ರ ಉದ್ಘಾಟನಾ ಸಮಾರಂಭ ಇದೇ 8ರಂದು ನಡೆಯಲಿದೆ.

ಬೆಳಿಗ್ಗೆ ಗಣಪತಿ ಹವನ, ಮಹಾಪೂಜೆ, ಸಾಧ್ವಿ ಮಾತಾನಂದ ಮಯಿ ಅವರಿಂದ ಭಜನಾ ಸತ್ಸಂಗ, ರಾಜಾಂಗಣಕ್ಕೆ ಶೋಭಾಯಾತ್ರೆ, ಪಾದಪೂಜೆ, ತುಲಾಭಾರ, ಉಯ್ಯಾಲೆ ಸೇವೆ, ಗುರುವಂದನೆ, 11ಗಂಟೆಗೆ ಶ್ರೀಮಾತಾ ಅನ್ನಛತ್ರ ಉದ್ಘಾಟನಾ ಸಮಾರಂಭ, ಧರ್ಮಸಭೆ, ರಾತ್ರಿ 7ರಿಂದ ರಂಗಪೂಜೆ, ಬೆಳ್ಳಿ ರಥೋತ್ಸವ ಸೇವೆ ನಡೆಯಲಿದೆ.

ಧರ್ಮಸಭೆಯಲ್ಲಿ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಸಾಧ್ವಿ ಮಾತಾನಂದಮಯಿ ಸಾನ್ನಿಧ್ಯ ವಹಿಸಲಿದ್ದಾರೆ. ಸೇವಾ ಕಾರ್ಯಗಳಿಗೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಚಾಲನೆ ನೀಡಲಿದ್ದು, ಅನ್ನಛತ್ರವನ್ನು ಉದ್ಯಮಿ ಸದಾಶಿವ ಕೆ. ಶೆಟ್ಟಿ ಕೂಳೂರು ಕನ್ಯಾನ ಉದ್ಘಾಟಿಸುವರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಿ. ಎಸ್. ಪ್ರಕಾಶ್, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಸಂಜೀವ ಮಠಂದೂರು, ಡಿ. ವೇದವ್ಯಾಸ ಕಾಮತ್, ಉಮಾನಾಥ ಎ.ಕೋಟ್ಯಾನ್, ಡಾ.ಭರತ್ ಶೆಟ್ಟಿ ವೈ., ವಿಶ್ವವಿದ್ಯಾಲಯ ಕಾಲೇಜು ಪ್ರಾಂಶುಪಾಲ ಡಾ.ಅನಸೂಯಾ ಕಿಶೋರ್ ಶೆಟ್ಟಿ, ಉದ್ಯಮಿಗಳಾದ ಪ್ರಸಾದ್ ರಾಜ್ ಕಾಂಚನ್, ವಾಮಯ್ಯ ಬಿ. ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ ಮುಂಬೈ, ದಯಾನಂದ ಹೆಗ್ಡೆ, ಮುಲುಂಡ್ ಮುಂಬೈ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT