ಶನಿವಾರ, ಜುಲೈ 2, 2022
25 °C

ವಿದೇಶಿ ಸಿಮ್‌ ಬಳಸಿ ಆಕ್ಷೇಪಾರ್ಹ ಪೋಸ್ಟ್‌: ಯುವಕನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ವಿದೇಶಿ ಸಿಮ್‌ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸಂಘರ್ಷಕ್ಕೆ ಧಕ್ಕೆ ತರುವ ಸಂದೇಶಗಳನ್ನು ಪೋಸ್ಟ್‌ ಮಾಡಿದ್ದ ಬೆಳ್ತಂಗಡಿ ತಾಲ್ಲೂಕಿನ ನಡ ಹೊಕ್ಕಿಲ ಮನೆಯ ಮೊಹಮ್ಮದ್ ಅಝ್ಮಲ್ (20) ಎಂಬಾತನನ್ನು ನಗರದ ಪೊಲೀಸರು ಬಂಧಿಸಿದ್ದಾರೆ. 

ಮಾರ್ಚ್‌ 4ರಂದು ನಗರದ ರಥಬೀದಿ ಕಾಲೇಜಿನಲ್ಲಿ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವೆ ಸಂಘರ್ಷ ನಡೆದಿತ್ತು. ಈ ಕುರಿತು 2 ಪ್ರಕರಣಗಳು ದಾಖಲಾಗಿದ್ದು, ಹಲವರನ್ನು ಬಂಧಿಸಲಾಗಿತ್ತು. ಈ ಪೈಕಿ ಆರೋಪಿಯೊಬ್ಬನಿಗೆ ಶಿವಮೊಗ್ಗದ ಹರ್ಷ ಮಾದರಿಯಲ್ಲಿ ಕೊಲೆ ಮಾಡುವ ಬೆದರಿಕೆ ಕೂಡ ಬಂದಿದ್ದವು. ಜತೆಗೆ ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುವ ಹಾಗೂ ಪ್ರಚೋದಿಸುವ ಸಂದೇಶಗಳನ್ನು ಜಾಲತಾಣಗಳಲ್ಲಿ ಹಾಕಲಾಗಿತ್ತು.

‘ಈ ಕುರಿತು ಸೆನ್ ಅಪರಾಧ ವಿಭಾಗದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ಅಝ್ಮಲ್‌ನನ್ನು ಮಂಗಳವಾರ ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್‌ ಕಸ್ಟಡಿಗೆ ಪಡೆಯಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

‘ಮಾರಿ_ಗುಡಿ__ಪೈ’ ಎಂಬ ನಕಲಿ ಇನ್‍ಸ್ಟಾಗ್ರಾಂ ಖಾತೆಯಿಂದ, ವಿದೇಶದಲ್ಲಿದ್ದ ಅವರ ಚಿಕ್ಕಪ್ಪನ ಸಿಮ್‌ ಬಳಸಿಕೊಂಡು ಪೋಸ್ಟ್‌ಗಳನ್ನು ಹಾಕುತ್ತಿದ್ದ. ಒಂದು ಟ್ವಿಟರ್, 4 ಇನ್‍ಸ್ಟಾಗ್ರಾಂ ಖಾತೆ ಹೊಂದಿದ್ದಾನೆ. ಕೆಲ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವುದು ಗೊತ್ತಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು