ಬುಧವಾರ, ಏಪ್ರಿಲ್ 1, 2020
19 °C

ಉತ್ತರ ಕನ್ನಡ| ಮಂಗನ ಕಾಯಿಲೆಗೆ ಮೊದಲ ಬಲಿ; ಮತ್ತೊಬ್ಬರಲ್ಲಿ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಸಿದ್ದಾಪುರ: ತೀವ್ರ ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಭಾಸ್ಕರ‌ ಹೆಗಡೆ ಎಂಬುವವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಅವರು ಮಂಗನ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
   
ಹೊನ್ನೇಘಟಗಿ ಸಮೀಪದ ಮಳಗುಳಿಯ 64 ವರ್ಷ ವಯಸ್ಸಿನ ಇವರು ಕಳೆದ 10 ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಶಿವಮೊಗ್ಗದ ನಂಜಪ್ಪ ಆಸ್ಪತ್ರೆ ಯಿಂದ ಮಣಿಪಾಲ ಆಸ್ಪತ್ರೆ ಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ‌

ಈ ವರ್ಷ ಮಂಗನ ಕಾಯಿಲೆಯಿಂದ ಮೃತಪಟ್ಟ ಮೊದಲ ಪ್ರಕರಣ ಇದಾಗಿದೆ. ಈ‌ಭಾಗದ ಮತ್ತೊಬ್ಬ ಮಹಿಳೆಯಲ್ಲಿ ಕೂಡ ಮಂಗನ ಕಾಯಿಲೆ ವೈರಾಣು ದೃಢ ಪಟ್ಟಿದ್ದು,ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು