ಶುಕ್ರವಾರ, ಆಗಸ್ಟ್ 6, 2021
25 °C

ಶಕ್ತಿ ವಸತಿ ಶಾಲೆಯಲ್ಲಿ ಆನ್‌ಲೈನ್ ಚಿತ್ರಕಲಾ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಇಲ್ಲಿನ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಅಂಗವಾಗಿ ಆನ್‌ಲೈನ್ ಚಿತ್ರಕಲಾ ಸ್ಪರ್ಧೆಯನ್ನು ಶುಕ್ರವಾರ ಆಯೋಜಿಸಲಾಗಿತ್ತು.

ಸ್ಪರ್ಧೆಯು ಎರಡು ವಿಭಾಗದಲ್ಲಿ ನಡೆದಿದ್ದು, 1-5 ತರಗತಿಯ ವಿದ್ಯಾರ್ಥಿಗಳಿಗೆ ಲಾಕ್‌ಡೌನ್‌ನ ಸದ್ಬಳಕೆ ಮತ್ತು 6-9 ನೇ ತರಗತಿಯ ವಿದ್ಯಾರ್ಥಿಗಳಿಗೆ ಲಾಕ್‌ಡೌನ್‌ನ ಮೊದಲು ಮತ್ತು ನಂತರ ಎಂಬ ವಿಷಯದ ಮೇಲೆ ಸ್ಪರ್ಧೆಯನ್ನು ನಡೆಸಲಾಯಿತು.

ಒಂದು ತಿಂಗಳಿಂದ ಆನ್‌ಲೈನ್ ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದ 1-9 ನೇ ತರಗತಿಯ ವಿದ್ಯಾರ್ಥಿಗಳು ಈ ಆನ್‌ಲೈನ್ ಚಿತ್ರಕಲಾ ಸ್ಪರ್ಧೆಯಲ್ಲೂ ಉತ್ಸಾಹದಿಂದ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಚಿತ್ರಕಲಾ ಶಿಕ್ಷಕ ಪೂರ್ಣೇಶ್ ಆಯೋಜಿಸಿದ್ದರು ಎಂದು ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ. ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.