ಮಂಗಳೂರು: ಈ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಪದವಿಯ ಪ್ರವೇಶಾತಿ ಅರ್ಜಿ ಸಲ್ಲಿಸುವ ಅವಧಿಯನ್ನು ಮಂಗಳೂರು ವಿಶ್ವವಿದ್ಯಾಲಯದ ಇದೇ 21 ರವರೆಗೆ ವಿಸ್ತರಿಸಿದೆ.

ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗಗಳು, ನಗರದ ವಿಶ್ವವಿದ್ಯಾಲಯ ಕಾಲೇಜು, ವಿಶ್ವವಿದ್ಯಾಲಯ ಸಂಧ್ಯಾ ಕಾಲೇಜು, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಚಿಕ್ಕ ಅಳುವಾರಿನ ಸ್ನಾತಕೋತ್ತರ ಕೇಂದ್ರ, ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ನಡೆಸಲಾಗುತ್ತಿರುವ ವಿವಿಧ ಸ್ನಾತಕೋತ್ತರ ಪದವಿಗೆ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಇದೇ 16 ರಿಂದ 21ರವರೆಗೆ ವಿಸ್ತರಿಸಲಾಗಿದೆ.

ಪಿ.ಜಿ. ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರವೇಶ ಪರೀಕ್ಷೆ ಹಾಗೂ ಇನ್ನಿತರ ಮಾಹಿತಿಗಳನ್ನು ಮಂಗಳೂರು ವಿಶ್ವವಿದ್ಯಾಲಯದ ವೆಬ್ಸೈಟ್ www.mangaloreuniversity.ac.inನಲ್ಲಿ ಪಡೆಯಬಹುದು.

ಭೌತಿಕ ತರಗತಿ: ಇದೇ 12 ರಂದು ಹೊರಡಿಸಿದ್ದ ಸುತ್ತೋಲೆಯನ್ನು ಹಿಂಪಡೆದಿರುವ ವಿಶ್ವವಿದ್ಯಾಲಯ, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಅನುಸರಿಸಿಕೊಂಡು, 17 ರಿಂದ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಿಗೆ ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.