ಉಳ್ಳಾಲ: ಅಸ್ಪ್ರಶ್ಯತೆಯಲ್ಲೇ ನಲುಗಿದ್ದ ಬಿಲ್ಲವ ಸಮಾಜದ ಇಂದಿನ ಬೆಳವಣಿಗೆಗೆ ಸಂಘಟನೆಗಳೇ ಕಾರಣ. ಆರ್ಥಿಕವಾಗಿ ಸಬಲರಾದವರು ಸಂಘಟನೆಯ ಮೂಲಕ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅವರನ್ನು ಸಮಾಜದ ಶಕ್ತಿಯನ್ನಾಗಿ ಬೆಳೆಸುವ ಕಾರ್ಯವೇ ಒಂದು ಸಾಧನೆಯಾಗಿದೆ ಎಂದು ಉಡುಪಿ -ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಳ್ಳಾಲ ಬ್ರಹ್ಮಶ್ರೀ ಬಿಲ್ಲವ ವೇದಿಕೆ ವತಿಯಿಂದ ತೊಕ್ಕೊಟ್ಟು ಅಂಬಿಕಾ ರಸ್ತೆಯ ಗಟ್ಟಿ ಸಮಾಜ ಭವನದಲ್ಲಿ ಭಾನುವಾರ ನಡೆದ 24ನೇ ವರ್ಷದ ಫಲಾನುಭವಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ-2025, ಬ್ರಹ್ಮಶ್ರೀ ಪ್ರಶಸ್ತಿ ಪ್ರದಾನ ಮತ್ತು ನೃತ್ಯ ಸ್ಪರ್ಧಾ ವೈಭವ ಉದ್ಘಾಟಿಸಿ ಮುಂಬೈನ ಭಾರತ್ ಕೊ–ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಸುವರ್ಣ ಅವರಿಗೆ ಬ್ರಹ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಮಹತ್ತರವಾದ ಕಾರ್ಯವನ್ನು ಕಳೆದ 24 ವರ್ಷಗಳಿಂದ ಬ್ರಹ್ಮಶ್ರೀ ಬಿಲ್ಲವ ವೇದಿಕೆ ನಡೆಸಿ ಬ್ರಹ್ಮಶ್ರೀ ಎಂಬ ಪ್ರಶಸ್ತಿಯನ್ನು ಅರ್ಹರಿಗೆ ನೀಡುತ್ತಿರುವುದು ಶ್ಲಾಘನೀಯ. ಶಿಕ್ಷಣದಿಂದ ವಂಚಿತರಾಗಿದ್ದ ನಮ್ಮ ಸಮಾಜ ಶಿಕ್ಷಣದ ಮೂಲಕ ಸಮಾಜದ ವಿವಿಧ ಕ್ಷೇತ್ರದಲ್ಲಿ ಇಂದು ಉನ್ನತ ಸ್ಥಾನ ಅಲಂಕರಿಸಿರುವುದು ಬಿಲ್ಲವ ಸಮಾಜಕ್ಕೆ ಹೆಮ್ಮೆಯ ವಿಚಾರವಾಗಿದೆ. ಬ್ಯಾಂಕ್ ಸೇವೆಗಳಿಂದ ವಂಚಿತರಾದವರಿಗೆ ಜನಾರ್ದನ ಪೂಜಾರಿ ಅವರು ಕೇಂದ್ರದ ಹಣಕಾಸು ಸಚಿವರಾಗಿದ್ದಾಗ ಸಾಲ ಸೌಲಭ್ಯ ನೀಡಿದ್ದರು ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ವಿದ್ಯಾರ್ಥಿಗಳು ಅವಕಾಶಗಳನ್ನ ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಬ್ಯಾಂಕಿಗ್ ಕ್ಷೇತ್ರದಲ್ಲಿ ಮಹತ್ತರ ಕ್ರಾಂತಿ ಮಾಡಿದ ಮುಂಬೈನ ಭಾರತ್ ಕೊ–ಆಪರೇಟಿವ್ ಬ್ಯಾಂಕ್ ಅಧ್ಯಕ್ಷ, ರಾಷ್ಟ್ರೀಯ ಬಿಲ್ಲವ ಮಹಾ ಮಂಡಲ, ಮೂಲ್ಕಿ ವಲಯದ ಉಪಾಧ್ಯಕ್ಷ ಸೂರ್ಯಕಾಂತ್ ಸುವರ್ಣ ಅವರು ಬ್ರಹ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಬ್ಯಾಂಕ್ನ ಅಭಿವೃದ್ಧಿಯಲ್ಲಿ ತಂದೆ ಜಯ ಸಿ.ಸುವರ್ಣ ಅವರ ಪಾತ್ರ ಮಹತ್ವದ್ದು, ಈ ಪ್ರಶಸ್ತಿ ಅವರಿಗೆ ಸಲ್ಲುತ್ತದೆ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಭಾಸ್ಕರ ಎಸ್.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದ ಮೊಕ್ತೇಸರ ಜಗದೀಪ್ ಡಿ.ಸುವರ್ಣ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಅಬಕಾರಿ ಇಲಾಖೆಯ ಮಂಗಳೂರು ಉಪವಿಭಾಗ 1ರ ಡಿವೈಎಸ್ಪಿ ಗಾಯತ್ರಿ ಸುವರ್ಣ, ಮಂಗಳೂರಿನ ಉದ್ಯಮಿ ಪ್ರವೀಣ್ ಸುವರ್ಣ, ಮಂಗಳೂರು ಬಿಲ್ಲವ ಬ್ರಿಗೇಡ್ನ ಅಧ್ಯಕ್ಷ ಸದಾನಂದ ಪೂಜಾರಿ, ಮಂಗಳೂರು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ, ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎ.ಜೆ.ಶೇಖರ್, ಮೊಕ್ತೇಸರ ದಿನೇಶ್ ಕೆ.ಅತ್ತಾವರ, ಕಿನ್ಯ ಬೆಳರಿಂಗೆ ಮಲರಾಯ ಧೂಮಾವತಿ ಬಂಟ ದೈವಗಳ ಚಾರಿಟಬಲ್ ಟ್ರಸ್ಟ್ ಭಂಡಾರ ಮನೆಯ ಆಡಳಿತ ಮೊಕ್ತೇಸರ ಬಾಬು ಶ್ರೀಶಾಸ್ತ ಕಿನ್ಯ, ಉದ್ಯಮಿ ಗೋಪಾಲ ಡಿ.ಬಿಲ್ಲವ, ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರದ ಮೊಕ್ತೇಸರ ಚಂದ್ರಶೇಖರ ಉಚ್ಚಿಲ್, ಬಿ.ಸಿ.ರೋಡ್ ಅನ್ನಪೂರ್ಣೇಶ್ವರಿ ದೇವಸ್ಥಾನದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಮಾಡೂರು ಸಾಯಿ ಮಂದಿರದ ಆಡಳಿತ ಮೊಕ್ತೇಸರ ಕೆ.ಪಿ.ಸುರೇಶ್, ತೊಕ್ಕೊಟ್ಟು ಸಹ್ಯಾದ್ರಿ ಕೊ–ಆಪರೇಟಿವ್ ಸೊಸೈಟಿ ನಿರ್ದೇಶಕ ಮಾಧವ ಪೂಜಾರಿ, ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ಕಾರ್ಯಾಧ್ಯಕ್ಷ ಸತೀಶ್ ಕರ್ಕೇರ, ಉಪಾಧ್ಯಕ್ಷ ಹರೀಶ್ ಮುಂಡೋಳಿ, ಪ್ರಧಾನ ಕಾರ್ಯದರ್ಶಿ ಆನಂದ ಕೆ.ಅಸೈಗೋಳಿ, ಮಹಿಳಾ ಸಮಿತಿ ಅಧ್ಯಕ್ಷೆ ಗಂಗಾ ಆನಂದ್ ಭಾಗವಹಿಸಿದ್ದರು.

ಬ್ರಹ್ಮಶ್ರೀ ಬಿಲ್ಲವ ವೇದಿಕೆಯಿಂದ 51 ವಿದ್ಯಾರ್ಥಿಗಳನ್ನ ಶೈಕ್ಷಣಿಕವಾಗಿ ದತ್ತು ಸ್ವೀಕರಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಉನ್ನತ ವ್ಯಾಸಂಗದಲ್ಲಿ ಸಾಧನೆ ಮಾಡಿದ 50 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ದತ್ತು ಸಂಚಾಲಕ ಜೀವನ್ ಕುಮಾರ್ ತೊಕ್ಕೊಟ್ಟು ಸ್ವಾಗತಿಸಿದರು. ಅಧ್ಯಕ್ಷ ಕೆ.ಟಿ.ಸುವರ್ಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಶಾಧಿಕಾರಿ ಲಕ್ಷ್ಮಣ್ ಪೂಜಾರಿ ವಂದಿಸಿದರು. ದಿನೇಶ್ ರಾಯಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.