ಬುಧವಾರ, ಮೇ 12, 2021
18 °C

‘ಧಾರ್ಮಿಕ ಕಾರ್ಯಗಳಿಗೆ ವಿನಾಯಿತಿ ನೀಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ನಗರದಲ್ಲಿ ನಡೆಯಲಿರುವ ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡುವಂತೆ ವಿಶ್ವ ಹಿಂದೂ ಪರಿಷತ್‌, ನಗರ ಪೊಲೀಸ್‌ ಕಮಿಷನರ್‌ಗೆ ಮನವಿ ಮಾಡಿದೆ.

ಕೋವಿಡ್–19 ನಿಂದಾಗಿ ಕಳೆದ ವರ್ಷವೂ ಧಾರ್ಮಿಕ ಕಾರ್ಯಕ್ರಮ ಗಳನ್ನು ನಡೆಸಲು ಸಾಧ್ಯವಾಗಿಲ್ಲ. 2 ತಿಂಗಳಿಂದ ಸಾಕಷ್ಟು ಕಡೆ ದೈವಾರಾ ಧನೆಯ ನೇಮ, ಕೋಲ, ಜಾತ್ರೆ, ನಾಗಮಂಡಲ, ಬ್ರಹ್ಮಕಲಶ, ಯಕ್ಷಗಾನ ದಂತಹ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಯಾಗಿವೆ ಎಂದು ತಿಳಿಸಿದೆ.

ಈಗಾಗಲೇ ದಿನಾಂಕ ನಿಗದಿ ಯಾಗಿದ್ದು, ಸಿದ್ಧತೆಗಳನ್ನೂ ಮಾಡ ಲಾಗಿದೆ. ಆರ್ಥಿಕ ಸಮಸ್ಯೆಯ ನಡುವೆಯೂ ನಾಡಿನ ಒಳಿತಿಗಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಸಾಕಷ್ಟು ಖರ್ಚು ಮಾಡಲಾಗಿದೆ. ಒಂದು ವೇಳೆ ಕಾರ್ಯಕ್ರಮ ನಡೆಯದೇ ಇದ್ದರೆ, ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಲಿದೆ ಎಂದು ಹೇಳಿದೆ.

ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಕೋವಿಡ್‌–19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಕಾರ್ಯಕ್ರಮಗಳನ್ನು ನಡೆಸಲು ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ಜಿಲ್ಲಾ ಘಟಕದ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು