ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಸಾಧನೆಯ ಪಥ ತಲುಪಲು ಪರಿಶ್ರಮ ಅಗತ್ಯ’

Published 1 ಜೂನ್ 2024, 4:31 IST
Last Updated 1 ಜೂನ್ 2024, 4:31 IST
ಅಕ್ಷರ ಗಾತ್ರ

ಮಂಗಳೂರು: ‘ವಿದ್ಯಾರ್ಥಿಗಳು ಸರಿಯಾದ ಯೋಜನೆ, ಕಠಿಣ ಪರಿಶ್ರಮ, ಸಮರ್ಪಣಾ ಮನೋಭಾವ ಹಾಗೂ ಛಲದೊಂದಿಗೆ ಮುನ್ನಡೆದರೆ ಸಾಧನೆಯ ಪಥ ತಲುಪಲು ಸಾಧ್ಯ. ಜೀವನದಲ್ಲಿ ಯಶಸ್ವಿಯಾಗಲು ಸಕಾರಾತ್ಮಕ ಮನೋಭಾವ ಹೊಂದಿರಬೇಕು ಎಂದು ಎಕ್ಸ್‌ಪರ್ಟ್‌ ಶಿಕ್ಷಣ ಮತ್ತು ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್ ನಾಯಕ್‍ ಹೇಳಿದರು.

ಎಕ್ಸ್‌ಪರ್ಟ್‌ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಆಯೋಜಿಸಿದ್ದ ಓರಿಯಂಟೇಷನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿ ಅರಿತು, ಸ್ವಯಂ ಶಿಸ್ತು, ಬದ್ಧತೆಯೊಂದಿಗೆ ಗಂಭೀರವಾಗಿ ಅಧ್ಯಯನ ಮಾಡಬೇಕು. ವಿದ್ಯಾರ್ಥಿಗಳು ತಮಗೆ ಸಿಗುವ ಪ್ರತಿಯೊಂದು ಸಣ್ಣ ಅವಕಾಶವನ್ನು ಕೂಡ ವ್ಯರ್ಥಮಾಡಬಾರದು. ವಿದ್ಯಾರ್ಥಿಯು ಶೈಕ್ಷಣಿಕ ಉತ್ಕೃಷ್ಟತೆ ಸಾಧಿಸಲು ಅವರ ಪರಿಶ್ರಮದೊಂದಿಗೆ ಪೋಷಕರ ಪ್ರೋತ್ಸಾಹ ಬಹುಮುಖ್ಯ. ಪೋಷಕರು ತಮ್ಮ ಮಕ್ಕಳಿಗೆ ಮಾದರಿಯಾಗಬೇಕು ಎಂದರು.

ವಿದ್ಯಾರ್ಥಿಗಳಿಗೆ ಅವರು ಪ್ರಮಾಣ ವಚನ ಬೋಧಿಸಿದರು. ಶಿಕ್ಷಣ ಸಂಸ್ಥೆಯ ಮಾಹಿತಿ-ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್ ಎನ್. ನಾಯಕ್, ಎ.ಐ.ಸಿ.ಇ. ವಿಭಾಗದ ಸಂಯೋಜಕ ಪ್ರೊ. ಶ್ಯಾಮ್‍ಪ್ರಸಾದ್ ಎಸ್, ಕಾಲೇಜಿನ ಶೈಕ್ಷಣಿಕ ಸಮಿತಿಯ ಸದಸ್ಯ ಬಿ. ವಿನಯ್ ಕುಮಾರ್  ಮಾತನಾಡಿದರು.

ಪ್ರಾಂಶುಪಾಲ ರಾಮಚಂದ್ರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕಿ ರಾಧಿಕಾ ಭಟ್ ಇದ್ದರು. ಉಪನ್ಯಾಸಕಿ ಅನುಷಾ ಕೆ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಅಶ್ವಿನಿ ಪೈ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT