ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಸ್ಕರ್ ಫರ್ನಾಂಡೀಸ್ ರಾಜಕಾರಣ ಮಾದರಿ: ರಮಾನಾಥ ರೈ

Published : 14 ಸೆಪ್ಟೆಂಬರ್ 2024, 14:09 IST
Last Updated : 14 ಸೆಪ್ಟೆಂಬರ್ 2024, 14:09 IST
ಫಾಲೋ ಮಾಡಿ
Comments

ಮಂಗಳೂರು: ರಾಜಕೀಯ ವಿರೋಧಿಗಳಿಂದಲೂ ಮೆಚ್ಚುಗೆ ಪಡೆದಿದ್ದ ಆಸ್ಕರ್ ಫರ್ನಾಂಡೀಸ್ ಅಜಾತಶತ್ರುವಾಗಿದ್ದರು. ಅವರ ಜೀವನ ಮತ್ತು ರಾಜಕಾರಣ ಎಲ್ಲರಿಗೂ ಮಾದರಿ ಎಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಆಸ್ಕರ್ ಫರ್ನಾಂಡೀಸ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಸ್ಕರ್ ಫರ್ನಾಂಡೀಸ್ ರಾಜಕಾರಣದಲ್ಲಿ ಹಲವಾರು ಜನರನ್ನು ಕೈಹಿಡಿದು ಬೆಳೆಸಿದರು. ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಸ್ಥಾನಮಾನ ಕೊಡಿಸಿದರು. ಪಕ್ಷದ ಪ್ರಮುಖ ನಾಯಕರಾಗಿದ್ದುಕೊಂಡೇ ಸಾಮಾನ್ಯ ಕಾರ್ಯಕರ್ತರ ಜೊತೆ ಸಂಪರ್ಕ ಇಟ್ಟುಕೊಂಡಿದ್ದರು. ಪಕ್ಷದ ಕಾರ್ಯಕರ್ತರನ್ನು ಕುಟುಂಬದ ಸದಸ್ಯರಂತೆ ಪ್ರೀತಿಸಿದ್ದರು, ಪಕ್ಷವನ್ನು ತಾಯಿಯಂತೆ ಪ್ರೀತಿಸುತ್ತಿದ್ದರು ಎಂದರು.

 ಆಸ್ಕರ್ ಫರ್ನಾಂಡೀಸ್ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಎಐಸಿಸಿ ಕಾರ್ಯದರ್ಶಿ ಪಿ. ಮೋಹನ್, ಕೆಪಿಸಿಸಿ ಸದಸ್ಯರಾದ ಪಿಯೂಸ್ ಎಲ್ ರೋಡ್ರಿಗಸ್, ಪೃಥ್ವಿರಾಜ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಶಾಲೆಟೆ ಪಿಂಟೊ, ಶಶಿಧರ್ ಹೆಗ್ಡೆ, ಶುಭೋದ್ ಆಳ್ವ, ಸುಹಾನ್ ಆಳ್ವ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT