ಮಂಗಳವಾರ, ಸೆಪ್ಟೆಂಬರ್ 21, 2021
21 °C
ಪಂಚೋಡಿಯಲ್ಲಿ ಹೀಗೊಂದು ಘಟನೆ

ಪುತ್ತೂರು:ಅಂಗಡಿಗೆ ಬೆಂಕಿ ಹಚ್ಚಿದ ಮಾಲೀಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು: ಮಾಲೀಕನೇ ತನ್ನ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅಂಗಡಿಯೊಳಗಿನ ಸಾಮಗ್ರಿಗಳನ್ನು ಸುಟ್ಟು ಭಸ್ಮಗೊಳಿಸಿದ ಘಟನೆಯೊಂದು ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಸೋಮವಾರ ನಡೆದಿದೆ.

ಮಹಮ್ಮದ್ ಎಂಬುವವರು ತಮ್ಮ ಮನೆ ಸಮೀಪ ಸ್ಟೇಷನರಿ-ದಿನಸಿ ಸಾಮಗ್ರಿ ವ್ಯಾಪಾರದ ಜತೆಗೆ ಚಹಾ ಕ್ಯಾಂಟೀನ್ ನಡೆಸುತ್ತಿದ್ದರು. ಎಂದಿನಂತೆ ಸೋಮವಾರ ಅಂಗಡಿ ಬಾಗಿಲು ತೆರೆದಿದ್ದ ಅವರು ಮಧ್ಯಾಹ್ನ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದನ್ನು ಕಂಡ ಸ್ಥಳೀಯರು ಬೆಂಕಿ ನಂದಿಸಲು ಮುಂದಾದ ವೇಳೆ ಮಹಮ್ಮದ್ ‘ನನ್ನ ಅಂಗಡಿಗೆ ನಾನೇ ಬೆಂಕಿ ಹಚ್ಚಿದ್ದೇನೆ. ಅಂಗಡಿ ಸುಟ್ಟು ಭಸ್ಮವಾಗಲಿ ನಿಮಗೇನು’ ಎಂದು ಬೆಂಕಿ ನಂದಿಸಲು ಬಂದವರನ್ನು ತಡೆದರು. ಅವರು ಮನೆಗೆ ತೆರಳಿದ ಬಳಿಕ ಸ್ಥಳೀಯರು ಬೆಂಕಿ ನಂದಿಸಿದರು. ಸ್ಥಳೀಯರು ನೀಡಿದ ಮಾಹಿತಿಯಂತೆ, ಸಂಪ್ಯ ಪೊಲೀಸ್ ಠಾಣೆಯ ಎಎಸ್ಐ ತಿಮ್ಮಯ್ಯ ಗೌಡ ಹಾಗೂ ಈಶ್ವರಮಂಗಲ ಹೊರಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಸಹಕರಿಸಿದರು.

ಚಹಾ ಮಾಡಲು ಬಳಸುತ್ತಿದ್ದ ಸ್ಟೌವ್‌ಗೆ ಅಳವಡಿಸಿದ್ದ ಸಣ್ಣ ಸಿಲಿಂಡರ್ ಸ್ಫೋಟಗೊಂಡಿದೆ. ಅಂಗಡಿಯ ಮಾಡು ಹೊರತುಪಡಿಸಿ ಉಳಿದೆಲ್ಲವೂ ಬೆಂಕಿಗಾಹುತಿಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.