ಶನಿವಾರ, ಜೂನ್ 19, 2021
22 °C

ಆಮ್ಲಜನಕ ಕೊರತೆ ಆಗದಂತೆ ಕ್ರಮ: ಕಾಮತ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಹಾಗೂ ಸಕಾಲದಲ್ಲಿ ಆಮ್ಲಜನಕ ಪೂರೈಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಆಮ್ಲಜನಕ ಪೂರೈಕೆದಾರರು, ಐಎಂಎ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ, ಆಮ್ಲಜನಕದ ಕೊರತೆ ಉಂಟಾಗದಂತೆ, ಸಕಾಲದಲ್ಲಿ ಆಮ್ಲಜನಕ ಪೂರೈಸುವ ಕುರಿತು ಚರ್ಚೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ‘ಈಗಾಗಲೇ ಇಎಸ್ಐ ಹಾಗೂ ಬಂಟ್ವಾಳದ ತಾಲ್ಲೂಕು ಆಸ್ಪತ್ರೆಯಲ್ಲಿ ಎಂಸಿಎಫ್ ವತಿಯಿಂದ ಸಿಎಸ್ಆರ್ ಅನುದಾನದಡಿ ಆಮ್ಲಜಕನ ಘಟಕ ನಿರ್ಮಿಸುವ ಕುರಿತು ನಿರ್ಧರಿಸಲಾಗಿದೆ. ಇನ್ನೊಂದು ತಾಲ್ಲೂಕಿಗೆ ಎಂಆರ್‌ಪಿಎಲ್ ಮೂಲಕ ಘಟಕ ನಿರ್ಮಾಣದ ರೂಪುರೇಷೆ ಸಿದ್ಧಪಡಿಸಲಾಗಿದೆ. ಇನ್ನುಳಿದ ಎರಡು ತಾಲ್ಲೂಕಿಗೆ ಸಣ್ಣ ಪ್ರಮಾಣದ ಆಕ್ಸಿಜನ್ ಘಟಕ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಶೀಘ್ರದಲ್ಲೇ ಯೋಜನೆ ಪೂರ್ಣಗೊಳಿಸುವ ಚಿಂತನೆಯಿದೆ' ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆಯಿಂದ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಜಿಲ್ಲಾಡಳಿತದ ವತಿಯಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು