ಬಂಟ್ವಾಳ: ಆಮ್ಲಜನಕ ಘಟಕ ಲೋಕಾರ್ಪಣೆ

ಬಂಟ್ವಾಳ: ‘ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ ₹ 1.40 ಕೋಟಿ ವೆಚ್ಚದ ಆಮ್ಲಜನಕ ಘಟಕವು ಪ್ರತಿ ನಿಮಿಷಕ್ಕೆ 500 ಲೀಟರ್ ಆಮ್ಲಜನಕ ಉತ್ಪಾದನಾ ಸಾಮರ್ಥ್ಯ ಹೊಂದಿದೆ. ಇದರಿಂದ ಹತ್ತಿರದ ಆಸ್ಪತ್ರೆಗಳಿಗೂ ಅನುಕೂಲವಾಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಸಿಎಸ್‌ಆರ್ ಅನುದಾನದಲ್ಲಿ ಅನುಷ್ಠಾನ ಗೊಂಡ ಆಮ್ಲಜನಕ ಘಟಕವನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಸಂಸದ ನಳಿನ್ ಕುಮಾರ್ ಕಟೀಲು ಶುಭ ಹಾರೈಸಿದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್, ತಹಶೀಲ್ದಾರ್ ರಶ್ಮಿ ಎಸ್.ಆರ್., ತಾಲ್ಲೂಕು ಪಂಚಾಯಿತಿ ಇಒ ರಾಜಣ್ಣ, ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಪುರಸಭಾ ಸದಸ್ಯರಾದ ಹರಿಪ್ರಸಾದ್, ರೇಖಾ ಪೈ, ಮೀನಾಕ್ಷಿ ಗೌಡ, ಶಶಿಕಲಾ ಬಿ., ದೇವಕಿ, ಚೈತನ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಜಯಂತಿ, ಬಿಜೆಪಿ ಕ್ಷೇತ್ರಾಧ್ಯಕ್ಷ
ದೇವಪ್ಪ ಪೂಜಾರಿ, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ರಾಮದಾಸ್ ಬಂಟ್ವಾಳ, ಎ.ಗೋವಿಂದ ಪ್ರಭು, ಮಾಧವ ಎಸ್.ಮಾವೆ, ಸುದರ್ಶನ್ ಬಜ, ಪ್ರಕಾಶ್ ಅಂಚನ್, ರಮಾನಾಥ ರಾಯಿ, ಗಣೇಶ್ ರೈ ಮಾಣಿ, ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರದೀಪ್ ಕುಮಾರ್ ಅಜ್ಜಿಬೆಟ್ಟು, ಯಶವಂತ ನಗ್ರಿ, ಕೇಶವ ದೈಪಲ, ಪುಷ್ಪರಾಜ್ ಚೌಟ, ಚಿದಾನಂದ ರೈ ಕಕ್ಯ, ಯಶೋಧರ ಕರ್ಬೆಟ್ಟು, ಆನಂದ ಶಂಭೂರು, ರೊನಾಲ್ಡ್ ಡಿಸೋಜ ಅಮ್ಟಾಡಿ, ಹರ್ಷಿಣಿ ಪುಷ್ಪಾನಂದ, ಮಹೇಶ್ ಶೆಟ್ಟಿ, ಉಮೇಶ್ ಅರಳ, ಮೋನಪ್ಪ ದೇವಸ್ಯ, ಸುರೇಶ ಕೋಟ್ಯಾನ್, ಸದಾಶಿವ ಶೆಣೈ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.