ಗುರುವಾರ , ಸೆಪ್ಟೆಂಬರ್ 23, 2021
27 °C
ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ಮೂಡುಬಿದಿರೆ, ಮೂಲ್ಕಿಗೆ ಆಮ್ಲಜನಕ ಘಟಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೂಡುಬಿದಿರೆ: ಕೋವಿಡ್ ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಮೂಡುಬಿದಿರೆ ಮತ್ತು ಮೂಲ್ಕಿ ಸೇರಿದಂತೆ ಜಿಲ್ಲೆಯ 17 ಕೇಂದ್ರಗಳಲ್ಲಿ ಆಮ್ಲಜನಕ ಘಟಕ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು.

ಶುಕ್ರವಾರ ಇಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು. ಮೂಡುಬಿದಿರೆ ಹಾಗೂ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈ ಘಟಕ ಸ್ಥಾಪಿಸಲಾಗುವುದು. ಒಂದು ಕೇಂದ್ರದಲ್ಲಿ ದಿನವೊಂದಕ್ಕೆ ಸುಮಾರು 25 ಸಿಲಿಂಡರ್‌ಗಳಷ್ಟು ಆಮ್ಲಜನಕವನ್ನು ಉತ್ಪಾದಿಸಲಾಗುವುದು. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೆ ದಿನವೊಂದಕ್ಕೆ ಸದ್ಯ ಆರು ಟನ್ ಆಮ್ಲಜನಕದ ಅಗತ್ಯ ಇದ್ದು, ಆಮ್ಲಜನಕ ಘಟಕ ನಿರ್ಮಾಣ ಪೂರ್ಣಗೊಂಡರೆ, ಎಂಟು ಟನ್ ಆಮ್ಲಜನಕ ಉತ್ಪಾದನೆಯಾಗುತ್ತದೆ. ಭವಿಷ್ಯದಲ್ಲಿ ಆಮ್ಲಜನಕದ ಸಮಸ್ಯೆ ಬರಲಾರದು ಎಂದರು.

ಹೋಂ ಐಸೊಲೇಷನ್‌ಗೆ ಅವಕಾಶ ಇಲ್ಲ: ಕೋವಿಡ್ ಸೋಂಕಿತರು ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುವ ಹಾಗಿಲ್ಲ. ಅಂತಹ ಪ್ರಕರಣಗಳಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅವರನ್ನು ಕೋವಿಡ್ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗಳಿಗೆ ದಾಖಲಿಸಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಶೇ 2.3ರಷ್ಟಿದೆ. ದಿನಕ್ಕೆ ಸುಮಾರು 8 ಸಾವಿರದಷ್ಟು ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಸಾರ್ವಜನಿಕರು ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದನ್ನು ಕಟ್ಟುನಿಟ್ಟುಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.