ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಲ್ಲವ, ಈಡಿಗ, ನಾಮಧಾರಿಗಳ ಬೇಡಿಕೆ ಈಡೇರಿಕೆಗಾಗಿ ಪಾದಯಾತ್ರೆ ಆರಂಭ

ಪ್ರಣವಾನಂದ ಸ್ವಾಮೀಜಿ ನೇತೃತ್ವ; ಕುದ್ರೋಳಿ ಕ್ಷೇತ್ರದಲ್ಲಿ ಚಾಲನೆ
Last Updated 6 ಜನವರಿ 2023, 20:50 IST
ಅಕ್ಷರ ಗಾತ್ರ

ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಇಲ್ಲಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ
ದಿಂದ ಬೆಂಗಳೂರಿಗೆ ಪಾದಯಾತ್ರೆ ಶುಕ್ರವಾರ ಆರಂಭವಾಯಿತು.

ಸಮುದಾಯದ ಮುಖಂಡ ಬಿ.ಜನಾರ್ದನ ಪೂಜಾರಿ ಹಾಗೂ ತೆಲಂಗಾಣದ ಸಚಿವ ವಿ.ಶ್ರೀನಿವಾಸ ಗೌಡ ಪಾದಯಾತ್ರೆಗೆ ಚಾಲನೆ ನೀಡಿದರು.

41 ದಿನಗಳ ಪಾದಯಾತ್ರೆ ಒಟ್ಟು 658 ಕಿ.ಮೀ ಕ್ರಮಿಸಲಿದ್ದು, ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ನೆಲಮಂಗಲ ಮಾರ್ಗವಾಗಿ ಬೆಂಗಳೂರು ತಲುಪಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT