ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೇಗಿಲ ನೆನಪು’ ಭತ್ತದ ಗದ್ದೆ ನಾಟಿ ಸಂಭ್ರಮ

ಇಡ್ಕಿದು ಗ್ರಾಮ ಪಂಚಾಯಿತಿ ಸಹಯೋಗ
Last Updated 8 ಆಗಸ್ಟ್ 2021, 3:22 IST
ಅಕ್ಷರ ಗಾತ್ರ

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ, ಗ್ರಾಮ ವಿಕಾಸ ಸಮಿತಿ, ಅಮೃತ ಸಿಂಚನ ರೈತ ಸೇವಾ ಒಕ್ಕೂಟ, ಗ್ರಾಮ ಪಂಚಾಯಿತಿ, ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಕೋಲ್ಪೆ, ವಿಷ್ಣು ಮೂರ್ತಿ ದೇವಸ್ಥಾನ ಕುಂಡಡ್ಕ ಇವರ ಸಹಯೋಗದಲ್ಲಿ ‘ನೇಗಿಲ ನೆನಪು’ ಭತ್ತದ ಗದ್ದೆ ನಾಟಿ ಕಾರ್ಯಕ್ರಮ ಬೀಡಿನ ಮಜಲು ಪದ್ಮಾವತಿ ಶೆಟ್ಟಿ ಅವರ ಗದ್ದೆಯಲ್ಲಿ ನಡೆಯಿತು.

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ ನಾರಾವಿ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಅಮೃತ ಸಿಂಚನ ರೈತ ಸೇವಾ ಒಕ್ಕೂಟದ ಅಧ್ಯಕ್ಷ ಪ್ರಕಾಶ್ ಕೆ.ಎಸ್.ಉರಿಮಜಲು, ಬಂಟ್ವಾಳ ಕೃಷಿ ಸಹಾಯಕ ನಿರ್ದೇಶಕ ಚೆನ್ನಕೇಶವ ಮೂರ್ತಿ ಕೃಷಿ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿಟ್ಲ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಎಸ್ ಸರಿಕಾರ್‌ ಅವರು ಭತ್ತದ ಬೆಳೆ ಪ್ರೋತ್ಸಾಹಕ್ಕಾಗಿ ಇಲಾಖೆಯಿಂದ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಬೀಡಿನ ಮಜಲು, ಇಡ್ಡಿದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋಕುಲ್ದಾಸ್ ಭಕ್ತ, ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕೆ.ಯಸ್ ಮುಕ್ಕುಡ, ರಾಜಾರಾಮ ಶೆಟ್ಟಿ ಕೊಲೆಗುತ್ತು, ದಯಾನಂದ ಶೆಟ್ಟಿ ಉಜಿರೆಮಾರು, ಕೋಂಕೋಡಿ ಪದ್ಮನಾಭ, ಇಡ್ಕಿದು ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಬೈಪದವು, ರಮೇಶ್ ಭಟ್ ಎಂ ಎಚ್,ಪ್ರಪುಲ್ಲಚಂದ್ರ ಪಿ ಜಿ ಪುರುಷೋತ್ತಮಮುಂಗ್ಲಿಮನೆ, ಇಡ್ಕಿದು ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಮ ಭಟ್ ನೀರಪಳಿಕೆ ಇದ್ದರು.

ಇಡ್ಕಿದು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ನಾಯ್ಕ್ ಎಸ್. ವಂದಿಸಿದರು. ಈಶ್ವರ ಕುಲಾಲ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT