ಪಡುಬಿದ್ರಿ: ಸಮಗ್ರ ಜೀರ್ಣೋದ್ಧಾರಗೊಂಡಿರುವ ಇಲ್ಲಿನ ಮಹಾಲಿಂಗೇಶ್ವರ ಮಹಾಗಣಪತಿ ದೇವಳ ಪುನರ್ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಏ. 23ರಿಂದ ಮೇ 4ರವರೆಗೆ ನಡೆಯಲಿದ್ದು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸಲಿರುವ ಪ್ರಚಾರ ವಾಹನಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ದೇವಳದ ಆನುವಂಶಿಕ ಮೊಕ್ತೇಸರ, ಪಡುಬಿದ್ರಿ ಪೇಟೆಮನೆ ಭವಾನಿಶಂಕರ ಹೆಗ್ಡೆ ವಾಹನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಹೊರೆಕಾಣಿಕೆ ಮೆರವಣಿಗೆ ಸಮಿತಿ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ‘ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ವೈಭವದ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಏ. 26ರಂದು ಸಂಜೆ ಉಡುಪಿ, ದ.ಕ. ಜಿಲ್ಲೆಯ ಸರ್ವರ ಸಹಕಾರದೊಂದಿಗೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಪ್ರಚಾರ ವಾಹನ ಪ್ರತಿ ಗ್ರಾಮಕ್ಕೆ ತೆರಳಿ ಆಮಂತ್ರಿಸಲಿದೆ ಎಂದರು.

ದೇವಳದ ಜೀಣೋದ್ಧಾರ, ಬ್ರಹ್ಮಕಲಶೋತ್ಸವ ಸಮಿತಿ ಪದಾಕಾರಿಗಳಾದ ಶ್ರೀನಾಥ್ ಹೆಗ್ಡೆ, ವೈ. ಸುಕುಮಾರ್, ನವೀನ್ಚಂದ್ರ ಜೆ. ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ವಿಷ್ಣುಮೂರ್ತಿ ಆಚಾರ್ಯ, ನವೀನ್ ಎನ್. ಶೆಟ್ಟಿ, ಎರ್ಮಾಳು ಪುಚ್ಚೊಟ್ಟುಬೀಡು ಚಂದ್ರಹಾಸ ಶೆಟ್ಟಿ, ಅಶೋಕ್ ಸಾಲ್ಯಾನ್, ಭರತ್ ದೇವಾಡಿಗ, ಅನಿಲ್ ಕುಮಾರ್ ಶೆಟ್ಟಿ, ಜಿತೇಂದ್ರ ಶೆಟ್ಟಿ ಬರ್ಪಾಣಿ, ರಮಾಕಾಂತ ರಾವ್, ಬಗ್ಗೇಡಿಗುತ್ತು ಶೇಖರ ಶೆಟ್ಟಿ, ಸತೀಶ್ ಆಚಾರ್ಯ, ಜಯ ಶೆಟ್ಟಿ ಪದ್ರ, ಸುರೇಶ್ ಪಡುಬಿದ್ರಿ, ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಪ್ರಚಾರ ಸಮಿತಿ ಸಂಚಾಲಕ ರಾಮಚಂದ್ರ ಆಚಾರ್ಯ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-28-206060859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.