ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ, ಆರೋಗ್ಯಕ್ಕೆ ನೆರವಿನ ಸಂಕಲ್ಪ: ಉಡುಪಿ ಪಲಿಮಾರು ಮಠದ ವಿದ್ಯಾಧೀಶ ತೀರ್ಥ

Last Updated 23 ಜನವರಿ 2020, 14:58 IST
ಅಕ್ಷರ ಗಾತ್ರ

ಮಂಗಳೂರು: ‘ಪರ್ಯಾಯದ ಅವಧಿಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸಾಮಾಜಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಾಧ್ಯವಾಗಲಿಲ್ಲ. ಈ ನಿಟ್ಟಿನಲ್ಲಿ ಮುಂದಿನ ಪರ್ಯಾಯ ತನಕ ಇವೆರಡು ವಿಚಾರಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಸಂಕಲ್ಪ ಮಾಡಿಕೊಂಡಿದ್ದೇವೆ’ ಎಂದು ಉಡುಪಿ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಹೇಳಿದರು.

ಪರ್ಯಾಯದ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿಗೆ ಬಂದ ಅವರು, ನಗರದ ಪಂಜಿಮೊಗರು ಶ್ರೀ ಗುರು ರಾಘವೇಂದ್ರ ಮಠದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪಲಿಮಾರು ಶ್ರೀಗಳು ಇದೇ 18ರಂದು ಅದಮಾರು ಮಠದ ಈಶಪ್ರಿಯ ತೀರ್ಥರಿಗೆ ಕೃಷ್ಣ ಪೂಜಾ ಕೈಂಕರ್ಯದ ಜವಾಬ್ದಾರಿ (ಪರ್ಯಾಯ)ಯನ್ನು ಹಸ್ತಾಂತರಿಸಿದ್ದರು.

‘ಪರ್ಯಾಯದ ಅವಧಿ (2017ರ ಜನವರಿಯಿಂದ 2019 ಜನವರಿ) ಯಲ್ಲಿ ಬಡವರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ನೆರವು ನೀಡಬೇಕು ಎಂದು ಸಂಕಲ್ಪ ಮಾಡಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ‘ಸಂಜೀವಿನಿ’ ಎಂಬ ಮೊಬೈಲ್ ಚಿಕಿತ್ಸಾಲಯವನ್ನೂ ನಡೆಸಿದ್ದೆವು. ಆದರೆ, ಇಂದು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳೂ ದುಬಾರಿಯಾಗಿದ್ದು, ಅರ್ಹ ಬಡವರಿಗೂ ಅಗತ್ಯಕ್ಕೆ ಬೇಕಾದಷ್ಟು ನೆರವು ನೀಡಲು ಸಾಧ್ಯವಾಗಲಿಲ್ಲ’ ಎಂದು ಬೇಸರವನ್ನು ಹೊರಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT