ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

'ಶ್ರೀಧರ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. ಕೂಡಲೇ ಅವರನ್ನು ನಗರದ ಜಿಲ್ಲಾ ಸರ್ಕಾರಿ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಕಾಡಳಿತದ ಮೂಲಗಳು ತಿಳಿಸಿವೆ.

2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾಗಿದ್ದರು. ಇವರಿಗೆ ಯಾವುದೇ ಹುದ್ದೆಯನ್ನು ನೀಡಿರಲಿಲ್ಲ. ಹಾಗಾಗಿ ಶ್ರೀಧರ ಹೆಗಡೆ ಅವರು ಫೆಬ್ರುವರಿಯಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.

ಅವರಿಗೆ ವೈದ್ಯರು ಚಿಕಿತ್ಸೆ ನೀಡಿದ್ದು, ಹೆಚ್ಚಿನ ಆರೈಕೆಗಾಗಿ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ. ಇವರ ಪತ್ನಿ ಜಯಂತಿ ಸ್ಟಾಫ್ ನರ್ಸ್ ಆಗಿ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಡಾ. ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಲೆಕ್ಕಾಧೀಕ್ಷಕ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಅವರ ಆರೈಕೆಗೆ ನೆರವಾಗಿದ್ದಾರೆ.

ಡಾ. ಆನಂದ್ ಹಾಗೂ ಸಂತೋಷ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ಶ್ರೀಧರ ಹೆಗಡೆ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.