ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು: ಮೊಗ್ರಾಲ್ ಪುತ್ತೂರು ಪಂಚಾಯತಿ ಸದಸ್ಯೆಯ ಮೃತದೇಹ ಪತ್ತೆ

Published 9 ಜನವರಿ 2024, 14:18 IST
Last Updated 9 ಜನವರಿ 2024, 14:18 IST
ಅಕ್ಷರ ಗಾತ್ರ

ಕಾಸರಗೋಡು: ಮೊಗ್ರಾಲ್ ಪುತ್ತೂರು ಪಂಚಾಯಿತಿ ಸದಸ್ಯೆ, ಮೊಗರು ನಿವಾಸಿ ಪುಷ್ಪಾ (45) ಅವರ ಮೃತದೇಹವು ಸ್ಥಳೀಯ ಚೆನ್ಯಾರ್ಕುಳಂ ಎಂಬಲ್ಲಿ ಪತ್ತೆಯಾಗಿದೆ.

ಮೊಗ್ರಾಲ್ ಪುತ್ತೂರು ಪಂಚಾಯಿತಿಯ ಮೂರನೇ ವಾರ್ಡ್ ಕೋಟೆಕುನ್ನು ಎಂಬಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರಿಗೆ ಮುಸ್ಲಿಂಲೀಗ್ ಬೆಂಬಲ ನೀಡಿತ್ತು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಪಂಚಾಯಿತಿ ಕಚೇರಿ ಆವರಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು. ಅವರಿಗೆ ಪತಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT